ಬೆಂಗಳೂರು: ಮೃಗಾಲಯದಲ್ಲಿರುವ ಪ್ರಾಣಿ,ಪಕ್ಷಿಗಳನ್ನು ದತ್ತು ಪಡೆಯಲು ನಟ ದರ್ಶನ್ ಅವರು ಕರೆ ನೀಡಿದ ಬೆನ್ನಲ್ಲೇ ನಟ ಉಪೇಂದ್ರ, ಮೈಸೂರು ಮೃಗಾಲಯದಲ್ಲಿನ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದಿದ್ದಾರೆ.

ಈ ಕುರಿತು ತಮ್ಮ ಟ್ವಿಟರ್ನಲ್ಲಿ ದತ್ತು ಪಡೆದ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡಿರುವ ಉಪೇಂದ್ರ, ‘ಪ್ರಾಣಿಗಳೇ ಗುಣದಲಿ ಮೇಲು. ನನ್ನ ಮೆಚ್ಚಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ರವರ ಕರೆಯಂತೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಗಾಲಯದಿಂದ ಆಫ್ರಿಕನ್ ಆನೆ ಒಂದನ್ನು ದತ್ತು ಪಡೆದು, ಈ ಮೂಲಕ ದರ್ಶನ್ರವರ ಮಹತ್ಕಾರ್ಯಕ್ಕೆ ಕೈಜೋಡಿಸಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.

ಜೊತೆಗೆ, ಇದೇ ಮೃಗಾಲಯದ ಚಾಮುಂಡಿ ಹೆಸರಿನ ಆನೆ ಮರಿಯನ್ನು ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ ಗೌಡ ಅವರು ದತ್ತು ಪಡೆದಿದ್ದಾರೆ ಎಂದು ದರ್ಶನ್ ತಮ್ಮ ಟ್ವಿಟರ್ನಲ್ಲಿ ತಿಳಿಸಿದ್ದಾರೆ.

‘ಕೋವಿಡ್ ಮಹಾಮಾರಿಯಿಂದ ಮಾನವಕುಲಕ್ಕೆ ಎಷ್ಟು ತೊಂದರೆ ಆಗಿದೆಯೋ ಅಷ್ಟೇ ತೊಂದರೆ ಪ್ರಾಣಿಸಂಕುಲಕ್ಕೂ ಆಗಿದೆ. ಕೋವಿಡ್ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಈ ಮೃಗಾಲಯಗಳು ಸಂಕಷ್ಟದಲ್ಲಿವೆ. ಜನರು ಈ ಪ್ರಾಣಿಗಳನ್ನು ದತ್ತು ಪಡೆಯಬಹುದು. ಒಂದು ಲವ್ಬರ್ಡ್ಗೆ ವರ್ಷಕ್ಕೆ ₹1 ಸಾವಿರ, ಹುಲಿಗೆ ₹1 ಲಕ್ಷ ಹಾಗೂ ಆನೆಗೆ ₹1.17 ಲಕ್ಷ ನೀಡಿ ದತ್ತುಪಡೆದು ಪ್ರಾಣಿಸಂಕುಲ ಉಳಿಸಲು, ಮೃಗಾಲಯ ಬೆಳೆಸಲು ಎಲ್ಲರೂ ಕೈಜೋಡಿಸಿ’ ಎಂದು ದರ್ಶನ್ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.