ಸದ್ಯ ಉಪೇಂದ್ರ ಅವರು ತಮ್ಮ ಬಹುನಿರೀಕ್ಷಿತ ಯುಐ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಹಾಗೇ ಅವರ ‘ತ್ರಿಶೂಲಂ’, ‘ಬುದ್ಧಿವಂತ 2’ ಸಿನಿಮಾಗಳು ನಿರ್ಮಾಣ ಹಂತದಲ್ಲಿವೆ. ಇದರ ನಡುವೆಯೇ ಅವರು ರಜನಿಕಾಂತ್ ಜೊತೆ ಕೂಲಿ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದಲ್ಲಿ ಅವರು ಕಾಳೀಶ್ ಎಂಬ ಪಾತ್ರ ಮಾಡುತ್ತಿದ್ದಾರೆ.
1968 ರಲ್ಲಿ ಉಡುಪಿಯ ಕೋಟೇಶ್ವರದಲ್ಲಿ ಜನಿಸಿದ ಉಪೇಂದ್ರ ಅವರು ‘ಅನಂತನ ಅವಾಂತರ’ ಚಿತ್ರದಲ್ಲಿ ನಟಿಸುವ ಮೂಲಕ ಉಪೇಂದ್ರ ಬೆಳ್ಳಿತೆರೆ ಪ್ರವೇಶಿಸಿದರು. ಇದು ತೆರೆಕಂಡಿದ್ದು 1989ರಲ್ಲಿ. ಅವರು ನಿರ್ದೇಶಿಸಿದ ಮೊದಲ ಚಿತ್ರ ‘ತರ್ಲೆ ನನ್ಮಗ’. ಬಳಿಕ ಹಲವು ಸಿನಿಮಾಗಳನ್ನು ನಿರ್ದೇಶಿಸಿದ ಅವರು ‘ಎ’ ಸಿನಿಮಾದ ಮೂಲಕ ನಾಯಕ ನಟನಾದರು.
ಉಪ್ಪಿ ನಿರ್ದೇಶಿಸಿದ ‘ಓಂ’ ಸಿನಿಮಾ ಇಂದಿಗೂ ಸಿನಿಪ್ರಿಯರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಯುಐ ಮೂಲಕ ಅವರು ಮತ್ತೆ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಇದರ ನಡುವೆ ರಾಜಕೀಯ ರಂಗಕ್ಕೂ ಪ್ರವೇಶ ಮಾಡಿರುವ ಅವರು ಪ್ರಜಾಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ.