‘ಕಬ್ಜ’ ಸಿನಿಮಾ ಟೈಟಲ್ ಬಿಡುಗಡೆ ಆದ ದಿನದಿಂದಲೂ ಸಂಚಲನ ಮೂಡಿಸುತ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ಅಭಿನಯದ ಈ ಪ್ಯಾನ್ ಇಂಡಿಯಾ ಸಿನಿಮಾದ ಟೀಸರ್ ಅನ್ನು ದೀಪಾವಳಿ ಹಬ್ಬಕ್ಕೆ ಬಿಡುಗಡೆ ಮಾಡುವುದಾಗಿ ನಿರ್ದೇಶಕ ಆರ್. ಚಂದ್ರು ತಿಳಿಸಿದ್ದರು.

ಆದರೆ ಈಗ ಟೀಸರ್ ಬಿಡುಗಡೆ ಮುಂದಕ್ಕೆ ಹೋಗಿದೆ. ನಟ ಪುನೀತ್ ರಾಜಕುಮಾರ್ ಅವರ ಅಗಲಿಕೆಯ ಕಾರಣದಿಂದ ಟೀಸರ್ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದೆ.

‘ಅಪ್ಪು ಅಗಲಿಕೆ ನಮ್ಮ ಕಬ್ಜ ತಂಡಕ್ಕೂ ಬಹಳ ನೋವು ತಂದಿದೆ. ಇಂತಹ ಸಂದರ್ಭದಲ್ಲಿ ಟೀಸರ್ ಬಿಡುಗಡೆ ಮಾಡಿ ಸಂಭ್ರಮಿಸುವುದು ಸರಿಯಲ್ಲ ಎಂಬ ಉದ್ದೇಶದಿಂದ ಚಿತ್ರದ ಟೀಸರ್ ಬಿಡುಗಡೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಟೀಸರ್ ಬಿಡುಗಡೆ ಮಾಡುತ್ತೇನೆ’ ಎಂದು ಟ್ವಿಟರ್ ಮೂಲಕ ಸಿನಿಪ್ರೇಕ್ಷಕರಿಗೆ ತಿಳಿಸಿದ್ದಾರೆ ಆರ್. ಚಂದ್ರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.