ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಂಡಿಬಿ 2023ರ ಬಹು ನಿರೀಕ್ಷಿತ ಭಾರತೀಯ ಸಿನಿಮಾ: ಸ್ಥಾನ ಪಡೆದ 'ಕಬ್ಜ'

Last Updated 9 ಜನವರಿ 2023, 14:03 IST
ಅಕ್ಷರ ಗಾತ್ರ

ಸಿನಿಮಾ, ಟಿವಿ ಕಾರ್ಯಕ್ರಮ ಹಾಗೂ ಸಿನಿಮಾ ತಾರೆಯರ ಅಧಿಕೃತ ಮಾಹಿತಿ ತಾಣವೆನಿಸಿಕೊಂಡಿರುವ ಇಂಟರ್​ನೆಟ್​ ಮೂವಿ ಡೇಟಾಬೇಸ್​ (ಐಎಂಡಿಬಿ) ಈ ವರ್ಷದ ಬಹುನಿರೀಕ್ಷಿತ ಭಾರತೀಯ ಚಿತ್ರಗಳ ಪಟ್ಟಿ ಬಿಡುಗಡೆ ಮಾಡಿದ್ದು, 20 ಚಿತ್ರಗಳ ಈ ಪಟ್ಟಿಯಲ್ಲಿ ಉಪೇಂದ್ರ ಹಾಗೂ ಸುದೀಪ್​ ಅಭಿನಯಿಸಿರುವ ಪ್ಯಾನ್​ ಇಂಡಿಯಾ ಚಿತ್ರ 'ಕಬ್ಜ' ಸ್ಥಾನ ಪಡೆದಿದೆ.

'ಕಬ್ಜ' ಚಿತ್ರವು ಈ ಪಟ್ಟಿಯ ಏಳನೇ ಸ್ಥಾನದಲ್ಲಿದ್ದು, ಮಿಕ್ಕಂತೆ ಶಾರುಖ್​ ಖಾನ್​ ಅಭಿನಯದ 'ಪಠಾಣ್​', ಅಲ್ಲು ಅರ್ಜುನ್​ ಅಭಿನಯದ 'ಪುಷ್ಪ - ದಿ ರೂಲ್​', ಪ್ರಭಾಸ್​ ಅಭಿನಯದ 'ಸಲಾರ್​' ಮತ್ತು 'ಆದಿಪುರುಷ್​', ವಿಜಯ್​ ಅಭಿನಯದ 'ವಾರಿಸು', ಸಲ್ಮಾನ್​ ಖಾನ್​ ಅಭಿನಯದ 'ಟೈಗರ್​ 3', ಕಮಲ್​ ಹಾಸನ್​ ಅಭಿನಯದ 'ಇಂಡಿಯನ್​ 2' ಮುಂತಾದ ಚಿತ್ರಗಳಿವೆ.

ಹಿಂದಿ, ತೆಲುಗು ಮತ್ತು ತಮಿಳು ಚಿತ್ರಗಳೇ ಹೆಚ್ಚಿರುವ ಈ ಪಟ್ಟಿಯಲ್ಲಿ ಕನ್ನಡದಿಂದ ಏಕೈಕ ಚಿತ್ರವಾಗಿ 'ಕಬ್ಜ' ಹೊರಹೊಮ್ಮಿದೆ.

ಶ್ರೀ ಸಿದ್ಧೇಶ್ವರ ಎಂಟರ್​ಪ್ರೈಸಸ್​ನಡಿ ಆರ್​. ಚಂದ್ರು ಬರೆದು ನಿರ್ಮಿಸಿ, ನಿರ್ದೇಶಿಸಿರುವ 'ಕಬ್ಜ' ಚಿತ್ರವು ಪ್ರಾರಂಭದಿಂದ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗಾಗಲೇ ಹಿಂದಿ ಅವತರಣಿಕೆಯ ಹಕ್ಕುಗಳನ್ನು ಬಾಲಿವುಡ್​ನ ಜನಪ್ರಿಯ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್​​ ಪಡೆದುಕೊಂಡಿದೆ.

‘ಕಬ್ಜ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ಉಪೇಂದ್ರ, ಸುದೀಪ್, ಶ್ರೀಯಾ ಶರಣ್ ಸೇರಿದಂತೆ ಪ್ರತಿಭಾವಂತರ ದೊಡ್ಡ ದಂಡೇ ಇರುವ ಈ ಚಿತ್ರಕ್ಕೆ ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT