ಶನಿವಾರ, ನವೆಂಬರ್ 28, 2020
25 °C

ಉಪ್ಪಿಗೆ ಮಾಲಾಶ್ರೀ ಸಿನಿಮಾ ನೆನಪು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಿಯಾಂಕಾ ಉಪೇಂದ್ರ ಮುಖ್ಯ ಭೂಮಿಕೆಯಲ್ಲಿರುವ ‘ಉಗ್ರಾವತಾರ’ ಚಿತ್ರದ ಮೋಷನ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ಮೋಷನ್‌ ಪೋಸ್ಟರ್ ವೀಕ್ಷಿಸಿದ ರಿಯಲ್‌ ಸ್ಟಾರ್‌ ಉಪೇಂದ್ರ ಅವರು ‘ಈ ಚಿತ್ರದ ದೃಶ್ಯ ತುಣುಕುಗಳನ್ನು ನೋಡುತ್ತಿದ್ದರೆ ಮಾಲಾಶ್ರೀ ಅವರ ಸಿನಿಮಾಗಳು ನೆನಪಾಗುತ್ತವೆ’ ಎಂದಿದ್ದಾರೆ.

ಈ ಚಿತ್ರದಲ್ಲಿ ಪ್ರಿಯಾಂಕಾ ಪೊಲೀಸ್‌ ಅಧಿಕಾರಿಯ ಪಾತ್ರ ನಿಭಾಯಿಸಿದ್ದಾರೆ. ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡಿ, ಪತ್ನಿಗೆ ಕೇಕ್‌ ತಿನ್ನಿಸಿದ ಉಪ್ಪಿ, ಪತ್ನಿಯ ನಟನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪಾತ್ರದ ಬಗ್ಗೆ ಮಾತನಾಡಿದ ಪ್ರಿಯಾಂಕಾ ಉಪೇಂದ್ರ ‘ಕಳೆದ ವರ್ಷವೂ ಹುಟ್ಟುಹಬ್ಬದ ದಿನವೇ ಇದೇ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಈ ವರ್ಷ ಮೋಷನ್ ಪೋಸ್ಟರ್‌ ಸಿದ್ಧವಾಗಿರುವುದು ಸಂತಸ ನೀಡಿದೆ. ನಿರ್ದೇಶಕರು ಕಥೆ ಹೇಳಿದಾಗ ಇದರಲ್ಲಿ ನಟಿಸಬಹುದಾ ಎಂಬ ಪ್ರಶ್ನೆ ಕಾಡಿತ್ತು. ಆದರೆ ನಿರ್ಮಾಪಕರು, ನಿರ್ದೇಶಕರು ಮತ್ತು ಛಾಯಾಗ್ರಾಹಕರು ಸಾಥ್ ನೀಡಿದ್ದರಿಂದ ಎಲ್ಲವನ್ನು ಸುಲಭವಾಗಿ ನಿಭಾಯಿಸಲು ಸಾಧ್ಯವಾಯಿತು. ಸಾಮಾಜಿಕ ವಿಷಯಗಳು, ಮಹಿಳೆಯರ ಮೇಲಿನ ಶೋಷಣೆ, ಅಪರಾಧ ಇದರ ಜೊತೆಗೆ ಒಂದಷ್ಟು ಗಂಭೀರ ವಿಷಯಗಳನ್ನು ಕಮರ್ಷಿಯಲ್ ಅಂಶ ಗಳೊಂದಿಗೆ ತೋರಿಸುವ ಪ್ರಯತ್ನ ಮಾಡಲಾಗಿದೆ. ಸಾಹಸ ದೃಶ್ಯಗಳು ನೈಜವಾಗಿ ಬರಲೆಂದು ಡ್ಯೂಪ್ ಬಳಸದೆ, ಒಂದಷ್ಟು ತರಬೇತಿ ಪಡೆದು ಅಭಿನಯಿಸಿದ್ದೇನೆ. ಐಪಿಎಸ್ ಅಧಿಕಾರಿ ರೂಪಾ ಅವರು ನನಗೆ ಪ್ರೇರಣೆ’ ಎಂದು ಖುಷಿ ಹಂಚಿಕೊಂಡರು.

‘ಇಷ್ಟು ದಿನ ಪ್ರಿಯಾಂಕಾ ಅವರು ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದರು. ಮೊದಲ ಬಾರಿ ಆ್ಯಕ್ಷನ್ ಸಿನಿಮಾದಲ್ಲಿ ನಟಿಸಿದ್ದಾರೆ. ಪೋಸ್ಟರ್ ನೋಡಿದವ ರೆಲ್ಲರೂ ವಾಹ್ ಎನ್ನುತ್ತಿದ್ದಾರೆ. ಪ್ರಿಯಾಂಕಾ ಅವರು ಸೆಟ್‌ನಲ್ಲಿ ತುಂಬಾ ಆಸಕ್ತಿ ತೋರಿಸುತ್ತಾರೆ. ಅವರ ಪ್ರೋತ್ಸಾಹದಿಂದಲೇ ಶೇ 30ರಷ್ಟು ಚಿತ್ರೀಕರಣ ಮುಗಿದಿದೆ. ಮೂರು ಫೈಟ್ ಬಾಕಿ ಇವೆ. ಡಿಸೆಂಬರ್ ಒಳಗೆ ಚಿತ್ರೀಕರಣ ‌ಮುಗಿಸಿ, ಸಂಕ್ರಾಂತಿ ಹಬ್ಬದಂದು ಚಿತ್ರ ಬಿಡುಗಡೆ ಮಾಡುವ ಯೋಜನೆ ಇದೆ’ ಎಂದರು ನಿರ್ದೇಶಕ ಗುರುಮೂರ್ತಿ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು