ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾದ ಟೀಸರ್‌ ಬಿಡುಗಡೆ: ಖುಷಿಯಾದ ಅಭಿಮಾನಿಗಳು

Last Updated 17 ಸೆಪ್ಟೆಂಬರ್ 2022, 11:51 IST
ಅಕ್ಷರ ಗಾತ್ರ

ರಿಯಲ್‌ ಸ್ಟಾರ್‌ ಉಪೇಂದ್ರ ನಟನೆಯ ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ ‘ಕಬ್ಜ’ ಸಿನಿಮಾದಟೀಸರ್‌ ಬಿಡುಗಡೆಯಾಗಿದೆ.

ಉಪೇಂದ್ರ ಅವರ ಜನ್ಮದಿನದ(ಸೆ.18) ಪ್ರಯುಕ್ತ ಟೀಸರ್‌ ಬಿಡುಗಡೆ ಮಾಡಲಾಗಿದೆ ಎಂದು ನಿರ್ದೇಶಕ ಆರ್‌.ಚಂದ್ರು ತಿಳಿಸಿದ್ದಾರೆ.

ಸತತ ಎರಡು ವರ್ಷ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದ ಚಿತ್ರತಂಡವು ಇದೀಗ ಟೀಸರ್‌ ಬಿಡುಗಡೆಗೆ ಮಾಡಿದೆ. ಶನಿವಾರ ಸಂಜೆ 5 ಗಂಟೆಗೆ ಆನಂದ್‌ ಆಡಿಯೊ ಯುಟ್ಯೂಬ್‌ ಚಾನೆಲ್‌ನಲ್ಲಿ ಟೀಸರ್‌ ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗುವುದು ಎಂದು ಚಿತ್ರತಂಡ ಹೇಳಿದೆ.

ಚಿತ್ರದಲ್ಲಿ ಕಿಚ್ಚ ಸುದೀಪ್‌ ಅವರು ‘ಭಾರ್ಗವ್‌ ಭಕ್ಷಿ’ ಎಂಬ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ‘ಕಬ್ಜ’ ಕೋಟೆಯಲ್ಲಿ ‘ಮಧುಮತಿ’ಯಾಗಿ ಬಹುಭಾಷಾ ನಟಿ ಶ್ರಿಯಾ ಸರಣ್‌ ಬಣ್ಣಹಚ್ಚಿದ್ದಾರೆ. ಬಾಲಿವುಡ್‌ನ ಖ್ಯಾತ ನಟ ನವಾಬ್‌ ಶಾ ಹಾಗೂ ಕೆ.ಜಿ.ಎಫ್‌ ಸಿನಿಮಾದಲ್ಲಿ ರಾಜೇಂದ್ರ ದೇಸಾಯಿ ಪಾತ್ರ ನಿರ್ವಹಿಸಿದ್ದ ಲಕ್ಷ್ಮೀಶ ಲಕ್ಷ್ಮಣ್‌, ತಮಿಳಿನ ‘ಐ’ ಚಿತ್ರದ ಖ್ಯಾತಿಯ ಕಾಮರಾಜನ್‌, ಜಗಪತಿ ಬಾಬು, ರಾಹುಲ್‌ ದೇವ್‌, ಸುನೀಲ್‌ ಪುರಾಣಿಕ್‌, ಪ್ರಮೋದ್‌ ಶೆಟ್ಟಿ, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ.

ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಕಬ್ಜ’ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್, ವಿಜಯ್, ಪೀಟರ್ ಹೆನ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT