ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UI Movie : ಈ ವರ್ಷದ ಅಂತ್ಯಕ್ಕೆ ‘ಯುಐ’ ತೆರೆಗೆ

Published 30 ಆಗಸ್ಟ್ 2023, 23:38 IST
Last Updated 30 ಆಗಸ್ಟ್ 2023, 23:38 IST
ಅಕ್ಷರ ಗಾತ್ರ

ಉಪೇಂದ್ರ ನಿರ್ದೇಶಿಸಿ, ನಟಿಸಿರುವ ‘ಯುಐ’ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರದಿಂದ ಸಾಗಿವೆ. ಇತ್ತೀಚೆಗಷ್ಟೇ ನಟ ಉಪೇಂದ್ರ ಚಿತ್ರದಲ್ಲಿನ ತಮ್ಮ ಪಾತ್ರದ ಡಬ್ಬಿಂಗ್‌ ಪೂರ್ಣಗೊಳಿಸಿದ್ದಾರೆ. 

ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿರುವ ಚಿತ್ರವಿದು. ಕೆ.ಪಿ. ಶ್ರೀಕಾಂತ್​ ಮತ್ತು ಜಿ. ಮನೋಹರನ್​ ಇದಕ್ಕೆ ಬಂಡವಾಳ ಹೂಡಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆಯಾಗಿತ್ತು. ಅದರಲ್ಲಿ ಯಾವ ವಿಷಯವನ್ನೂ ಬಿಟ್ಟುಕೊಡದ ಉಪೇಂದ್ರ, ‘ನನಗೆ ಪ್ರಚಾರ ಮಾಡುವ ಇರಾದೆ ಇಲ್ಲ. ಒಳ್ಳೆಯ ಚಿತ್ರವನ್ನು ಪ್ರೇಕ್ಷಕರೇ ಪ್ರಚಾರ ಮಾಡುತ್ತಾರೆ’ ಎಂದಿದ್ದರು. ಈ ಹೊಸ ಬಗೆಯ ಪ್ರಚಾರ ತಂತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ‘ಫಸ್ಟ್‌ ಲುಕ್‌ ಬಿಡುಗಡೆ ಮಾಡಲಾರೆ’ ಎಂದು ಪ್ರೇಕ್ಷಕರ ತಲೆಗೆ ಹುಳ ಬಿಡುವ ಯತ್ನ ಮಾಡಿದ್ದರು. 

‘ಚಿತ್ರೀಕರಣ ಪೂರ್ತಿಯಾಗಿದೆ. ಆದರೆ ಒಂದು ಹಾಡಿನ ಚಿತ್ರೀಕರಣ ಬಾಕಿಯಿದೆ. ಐದು ಭಾಷೆಗಳಲ್ಲಿ ಚಿತ್ರ ತೆರೆಗೆ ಬರುತ್ತಿದ್ದು, ಈ ಹಾಡಿಗೆ ಬೇರೆ ಭಾಷೆಯ ಸ್ಟಾರ್‌ ನಟನನ್ನು ತರುತ್ತೇವೆ. ನಮ್ಮದೇ ನಾಡಿನ ಕಥೆಯಾಗಿದ್ದು, ಹೆಚ್ಚು ಗ್ರಾಫಿಕ್ಸ್‌ ಬಳಕೆ ಮಾಡಿದ್ದೇವೆ. ಹೀಗಾಗಿ ಪೋಸ್ಟ್‌ ಪ್ರೊಡಕ್ಷನ್‌ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಈ ವರ್ಷದ ಅಂತ್ಯಕ್ಕೆ ಚಿತ್ರ ಬಿಡುಗಡೆ ಮಾಡುವ ಆಲೋಚನೆ ಇದೆ’ ಎಂದು ನಿರ್ಮಾಪಕ ಕೆ.ಪಿ. ಶ್ರೀಕಾಂತ್​ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT