‘ಉರಿ’ ಉಚಿತ ಪ್ರದರ್ಶನ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಮುಖಂಡ ಎನ್.ಎಸ್.ನಂದೀಶ್ ರೆಡ್ಡಿ ಅವರು, ಉಚಿತವಾಗಿ ‘ಉರಿ– ದಿ ಸರ್ಜಿಕಲ್ ಸ್ಟ್ರೈಕ್’ ಚಲನಚಿತ್ರದ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆ.ಆರ್.ಪುರ ಲೋಕಸಭಾ ಕ್ಷೇತ್ರದಲ್ಲಿ ಸೋತಿರುವ ನಂದೀಶ್ ರೆಡ್ಡಿ ಅವರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದಾರೆ. ಈ ಕ್ಷೇತ್ರವನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಪ್ರತಿನಿಧಿಸುತ್ತಿದ್ದಾರೆ.
ದೊಡ್ಡನೆಕ್ಕುಂದಿಯ ಅರೆನಾ ಮಾಲ್‌ನಲ್ಲಿ ಮಂಗಳವಾರ ಬೆಳಿಗ್ಗೆ 9 ಗಂಟೆಯ ಪ್ರದರ್ಶನಕ್ಕೆ ಉಚಿತ ಪ್ರವೇಶ ನೀಡಲಾಗಿತ್ತು. ‘ಮುಂದಿನ ಮಂಗಳವಾರದ ವರೆಗೆ ಕ್ಷೇತ್ರದ ಮತದಾರರು ಉಚಿತವಾಗಿ ಚಿತ್ರ ವೀಕ್ಷಿಸಬಹುದು’ ಎಂದು ರೆಡ್ಡಿ ತಿಳಿಸಿದರು.
ಬರಹ ಇಷ್ಟವಾಯಿತೆ?
15
0
0
1
5
0 comments
View All