ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮುಂದೂಡಿಕೆಯಾದ ಬೆನ್ನಲ್ಲೇ ಹಲವು ಚಿತ್ರತಂಡಗಳು ತಮ್ಮ ಸಿನಿಮಾಗಳನ್ನು ಮಾರ್ಚ್ 19ರಂದೇ ಬಿಡುಗಡೆ ಮಾಡುವುದಾಗಿ ಘೋಷಿಸಿವೆ.

ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ತೆರೆಕಾಣಲಿದೆ. ಹರೀಶ್ ಶಂಕರ್ ನಿರ್ದೇಶನದ ಈ ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದೆ. ಈ ಹಿಂದೆ ಮಾರ್ಚ್ 26ರಂದು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಇದೀಗ ಒಂದು ವಾರದ ಮೊದಲೇ ಸಿನಿಮಾ ತೆರೆಗೆ ಬರಲಿದೆ.

ಸಿನಿಮಾದಲ್ಲಿ ರಾಶಿ ಖನ್ನಾ ಹಾಗೂ ಶ್ರೀಲೀಲಾ ನಾಯಕಿಯರಾಗಿ ನಟಿಸಿದ್ದು, ಓರ್ವ ಐಪಿಎಸ್ ಅಧಿಕಾರಿ ಹಾಗೂ ಆತನ ಮಗಳ ಸುತ್ತ ಸಿನಿಮಾದ ಕಥೆ ಇದೆ. ಮಾರ್ಚ್ 19ರಂದು ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್–2’ ಸಿನಿಮಾವೂ ತೆರೆಕಾಣುತ್ತಿದ್ದು, ಚಿತ್ರಮಂದಿರಗಳಲ್ಲಿ ಸಿನಿಮಾ ಹಬ್ಬವಿರಲಿದೆ.⇒v

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.