ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾಲಿ ಧನಂಜಯ್ ನಟನೆಯ ‘ಉತ್ತರಕಾಂಡ’ಕ್ಕೆ ಎಂಟ್ರಿ ಕೊಟ್ಟ ನಟಿ ಚೈತ್ರಾ ಜೆ. ಆಚಾರ್

Published 16 ಏಪ್ರಿಲ್ 2024, 7:44 IST
Last Updated 16 ಏಪ್ರಿಲ್ 2024, 7:44 IST
ಅಕ್ಷರ ಗಾತ್ರ

ಟೋಬಿ, ಸಪ್ತ ಸಾಗರದಾಚೆ(ಸೈಡ್ ಬಿ) ಚಿತ್ರದಲ್ಲಿ ಗಮನಾರ್ಹ ಪಾತ್ರಗಳಲ್ಲಿ ನಟಿಸಿ ಪ್ರೇಕ್ಷಕರ ಗಮನಸೆಳೆದ ನಟಿ ಚೈತ್ರಾ ಬಿ. ಆಚಾರ್ ಇದೀಗ ನಟ ಡಾಲಿ ಧನಂಜಯ್ ಅವರ ಮುಂದಿನ ಚಿತ್ರ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿರುವ ಚೈತ್ರಾ, ಚಿತ್ರದ ಪೋಸ್ಟರ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ‘ಲಚ್ಚಿ’ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಚಿತ್ರದಲ್ಲಿ ಚೈತ್ರ ಅವರು ಪಕ್ಕಾ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿರುವುದು ಪೋಸ್ಟರ್‌ನಲ್ಲಿ ಕಾಣಬಹುದು. ಪಾತ್ರದ ಹೆಸರನಷ್ಟೇ ಬಹಿರಂಗಗೊಳಿಸಿದ ಅವರು ಹೆಚ್ಚಿನ ಮಾಹಿತಿ ನೀಡಿಲ್ಲ. ನಟಿ ರಮ್ಯಾ ಅವರ ಸ್ಥಾನಕ್ಕೆ ಚೈತ್ರಾ ಅವರನ್ನು ಬದಲಾಯಿಸಲಾಗಿದೆಯೇ ಎಂಬ ಬಗ್ಗೆಯೂ ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ.

ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾ ಮುಹೂರ್ತ 2022ರ ನವೆಂಬರ್‌ನಲ್ಲಿ ನಡೆದಿತ್ತು. ಡಾಲಿ ಜೋಡಿಯಾಗಿ ಮೋಹಕ ತಾರೆ ರಮ್ಯಾ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರರಂಗ ತಿಳಿಸಿತ್ತು. ದಿನಾಂಕ ಹೊಂದಾಣಿಕೆಯಾಗದ ಕಾರಣ ಚಿತ್ರತಂಡದಿಂದ ಹೊರನಡೆದಿರುವುದಾಗಿ ರಮ್ಯಾ ಇತ್ತೀಚೆಗೆ ಮಾಹಿತಿ ನೀಡಿದ್ದರು.

ಕೆಆರ್‌ಜಿ ಸ್ಟುಡಿಯೋಸ್‌ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT