ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿ.ಮನೋಹರ್‌ ನಿರ್ದೇಶನದಲ್ಲಿ ‘ದರ್ಬಾರ್‌’

Last Updated 30 ಮಾರ್ಚ್ 2023, 4:46 IST
ಅಕ್ಷರ ಗಾತ್ರ

ಸಂಗೀತ ನಿರ್ದೇಶಕ ವಿ.ಮನೋಹರ್ 23 ವರ್ಷಗಳ ನಂತರ ನಿರ್ದೇಶನಕ್ಕಿಳಿದಿದ್ದಾರೆ. ಚಿತ್ರದ ಹೆಸರು ‘ದರ್ಬಾರ್’. ಸತೀಶ್ ಕಥೆ ಬರೆದು ನಿರ್ಮಾಣದ ಜೊತೆಗೆ ನಾಯಕನಾಗಿಯೂ ನಟಿಸಿದ್ದಾರೆ. ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

ಈ ಸಿನಿಮಾ ಬಗ್ಗೆ ಮನೋಹರ್‌ ಹೇಳಿದ್ದಿಷ್ಟು, ‘ನಾನು ‘ಇಂದ್ರಧನುಷ್’ ಚಿತ್ರ ಮಾಡಿದ ನಂತರ ಏನೇನೋ ಆಯಿತು. ಬಳಿಕ ನಾನೂ ಧಾರಾವಾಹಿ, ಸಂಗೀತ ನಿರ್ದೇಶನ ಎಂದೆಲ್ಲಾ ತೊಡಗಿಸಿಕೊಂಡೆ. ಸಿನಿಮಾ ಶುರು ಮಾಡಲು ಬಂದವರು ನಂತರ ಮುಂದುವರಿಯುತ್ತಲೇ ಇರಲಿಲ್ಲ. ಈ ಮೊದಲು ನಾನು ರಾಜಕೀಯದ ಬಗ್ಗೆ ತಿಳಿದುಕೊಂಡಿದ್ದೆ. ಇದೇ ಕಂಟೆಂಟ್ ಇಟ್ಟುಕೊಂಡು ಸಿನಿಮಾ ಮಾಡಬೇಕು ಎಂದುಕೊಂಡಿದ್ದೆ. ಸತೀಶ್ ಅವರು ನನ್ನ ಸ್ನೇಹಿತರು. ಇತ್ತೀಚೆಗೆ ಸಿಕ್ಕಾಗ ಅವರು ಈ ಕಥೆ ಹೇಳಿದರು. ಇಂದಿನ ರಾಜಕೀಯವನ್ನು ವ್ಯಂಗ್ಯವಾಗಿ ಹೇಳುವ ಸಬ್ಜೆಕ್ಟ್ ಇದು’ ಎಂದಿದ್ದಾರೆ.

ನಾಯಕಿ ಜಾಹ್ನವಿ ಅವರಿಗೆ ಇದು ಮೊದಲ ಚಿತ್ರ. ನಾಯಕಿ ಮನೋವಿಜ್ಞಾನ ವಿದ್ಯಾರ್ಥಿನಿ. ರಜಾಕಾಲದಲ್ಲಿ ಊರಿಗೆ ಬಂದಾಗ ನಾಯಕನ ಪರಿಚಯವಾಗಿ ಅವನಿಗೆ ಪೂರಕವಾಗಿ ಕೆಲಸ ಮಾಡುತ್ತಾಳೆ. ಮುಂದೇನು ಅನ್ನುವುದನ್ನು ಚಿತ್ರ ಹೇಳಲಿದೆಯಂತೆ.

ಹಿರಿಯ ಕಲಾವಿದರಾದ ಎಂ.ಎನ್.ಲಕ್ಷ್ಮೀದೇವಿ, ಅಶೋಕ್, ಸಾಧು ಕೋಕಿಲ, ನವೀನ್ ಡಿ. ಪಡೀಲ್, ಹುಲಿ ಕಾರ್ತಿಕ್‌ ಅಭಿನಯಿಸಿದ್ದಾರೆ. ಚಿತ್ರದಲ್ಲಿ 3 ಹಾಡುಗಳಿವೆ. ಶೀರ್ಷಿಕೆ ಗೀತೆಯನ್ನು ಚಂದನ್ ಶೆಟ್ಟಿ ಹಾಡಿದ್ದಾರೆ. ರಾಜಕೀಯ ವಿಡಂಬನೆಯ ಹಾಡನ್ನು ಉಪೇಂದ್ರ ಹಾಡಿದ್ದಾರೆ. ಇನ್ನು ಡ್ಯುಯೆಟ್ ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ದರ್ಬಾರ್ ಪ್ರೊಡಕ್ಷನ್ಸ್ ಮೂಲಕ ಬಿ.ಎನ್. ಶಿಲ್ಪಾ ಅವರು ನಿರ್ಮಾಣ ಮಾಡಿದ್ದಾರೆ. ಮಾಸ್ ಮಾದ, ವಿನೋದ್ ಸಾರಥ್ಯದ 3 ಸಾಹಸ ದೃಶ್ಯಗಳು ಚಿತ್ರದಲ್ಲಿವೆ. ಮಂಡ್ಯ, ಮದ್ದೂರು ಹಾಗೂ ಕೋಲಾರ ಸಮೀಪದ ಮಾಲೂರಿನಲ್ಲಿ ಚಿತ್ರೀಕರಣ ನಡೆದಿದೆ. ಏಪ್ರಿಲ್‌ನಲ್ಲಿ ಈ ಚಿತ್ರ ತೆರೆಗೆ ಬರಲಿದೆ ಎಂದಿದೆ ಚಿತ್ರತಂಡ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT