ತಮಿಳಿನ ಹಾಸ್ಯ ನಟ ವಡಿವೇಲುಗೆ ಕೋವಿಡ್ ದೃಢ

ಚೆನ್ನೈ: ತಮಿಳು ಚಿತ್ರರಂಗ ಖ್ಯಾತ ಹಾಸ್ಯ ನಟ ವಡಿವೇಲು ಅವರಿಗೆ ಕೋವಿಡ್ ದೃಢಪಟ್ಟಿದ್ದು ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ
ಇಲ್ಲಿನ ಶ್ರೀರಾಮಚಂದ್ರ ಮೆಡಿಕಲ್ ಸೆಂಟರ್ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಓಮೈಕ್ರಾನ್ ಸೋಂಕು ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಡಿವೇಲು ಕೆಲ ದಿನಗಳ ಹಿಂದಷ್ಟೆ ಇಂಗ್ಲೆಂಡ್ನಿಂದ ಮರಳಿದ್ದಾರೆ. ಅವರು ನೂತನ ಸಿನಿಮಾದ ಕೆಲಸಕ್ಕಾಗಿ ನಿರ್ದೇಶಕರೊಂದಿಗೆ ಲಂಡನ್ಗೆ ತೆರಳಿದ್ದರು. ಅವರ ಗಂಟಲು ಮಾದರಿಯನ್ನು ಹೆಚ್ಚಿನ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.
ಕೆಲ ದಿನಗಳ ಕಾಲ ಸಿನಿಮಾಗಳಿಂದ ದೂರವೇ ಇದ್ದ ವಡಿವೇಲು ಹೊಸ ಸಿನಿಮಾದಲ್ಲಿ ನಟನೆ ಮಾಡುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.