ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರುತೆರೆಯಿಂದ ಬೆಳ್ಳಿತೆರೆಗೆ ವಂಶಿಕಾ

Last Updated 1 ಸೆಪ್ಟೆಂಬರ್ 2022, 7:52 IST
ಅಕ್ಷರ ಗಾತ್ರ

ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಖ್ಯಾತಿ ಪಡೆದಿರುವ ಮಾಸ್ಟರ್ ಆನಂದ್ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಇದೀಗ ಮಾಸ್ಟರ್‌ ಆನಂದ್‌ ಪುತ್ರಿಯೂ ಕಿರುತೆರೆಯಿಂದ ಬೆಳ್ಳಿತೆರೆಗೆ ಹೆಜ್ಜೆ ಇಡುತ್ತಿದ್ದಾಳೆ. ಪಟಪಟ ಎಂದು ಮಾತನಾಡುತ್ತಾರಿಯಾಲಿಟಿ ಶೋ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ವಂಶಿಕಾ ತಾನೂ ‘Love ...ಲಿ’ಯಾಗಿದ್ದೇನೆ ಎಂದಿದ್ದಾಳೆ.

ನಟ ವಸಿಷ್ಠ ಸಿಂಹ ನಟಿಸುತ್ತಿರುವ ಸಿನಿಮಾ Love..ಲಿ ಸೆಟ್‌ಗೆ ವಂಶಿಕಾ ಅಂಜನಿ ಕಶ್ಯಪ್‌ ಹೆಜ್ಜೆ ಇಟ್ಟಿದ್ದಾಳೆ. ವಂಶಿಕಾ, ತನು ಎಂಬ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಸೆಪ್ಟೆಂಬರ್ 6ರಿಂದ ವಂಶಿಕಾ ಭಾಗದ ಚಿತ್ರೀಕರಣ ಆರಂಭವಾಗಲಿದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆ ಪಾತ್ರ ಸೃಷ್ಟಿಸಿದ್ದು ನೋಡುಗರಿಗೆ ವಂಶಿಕಾ ಖಂಡಿತವಾಗಿಯೂ ಮನರಂಜನೆ ನೀಡುತ್ತಾಳೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕೇಶವ್.

ಈಗಾಗಲೇ ಸಿನಿಮಾದ ಶೇ 50 ಚಿತ್ರೀಕರಣ ಪೂರ್ಣಗೊಂಡಿದ್ದು, ಆ್ಯಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹನಿಗೆ ಜೋಡಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ನಾಯಕಿಯಾಗಿ ನಟಿಸುತ್ತಿದ್ದಾರೆ.

‘ಮಫ್ತಿ’ ನಿರ್ದೇಶಕ ನರ್ತನ್‌ ಜೊತೆಗೆ ಕೆಲಸ ಮಾಡಿರುವ ಅನುಭವ ಹೊಂದಿರುವ ಚೇತನ್‌ ಕೇಶವ್‌ ಈಗ ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದಾರೆ. ರೌಡಿಸಂ ಕಥೆ ಜೊತೆಗೆ ಆ್ಯಕ್ಷನ್‌ ರೊಮ್ಯಾಂಟಿಕ್‌ ಪ್ರೇಮ ಕಥಾಹಂದರವನ್ನು ಈ ಸಿನಿಮಾ ಹೊಂದಿದ್ದು, ರವೀಂದ್ರ ಕುಮಾರ್‌ ಚಿತ್ರದ ನಿರ್ಮಾಪಕರು. ಹರೀಶ್‌ ಕೊಮ್ಮೆ ಸಂಕಲನ, ಅಶ್ವಿನ್ ಕೆನಡಿ ಛಾಯಾಗ್ರಹಣ ಹಾಗೂ ಅನೂಪ್‌ ಸಿಳೀನ್‌ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT