ಮಂಗಳವಾರ, 3 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರಾಹಚಕ್ರಂನಲ್ಲಿ ಸಾಯಿಕುಮಾರ್‌–ಪ್ರೇಮಾ: ಮಂಜು ಮಸ್ಕಲ್‌ಮಟ್ಟಿ ನಿರ್ದೇಶನ

Published 17 ಸೆಪ್ಟೆಂಬರ್ 2023, 19:53 IST
Last Updated 17 ಸೆಪ್ಟೆಂಬರ್ 2023, 19:53 IST
ಅಕ್ಷರ ಗಾತ್ರ

ನಟಿ ಪ್ರೆಮಾ ಮತ್ತು ಸಾಯಿಕುಮಾರ್‌ ಮೊದಲ ಸಲ ಜೊತೆಯಾಗಿ ನಟಿಸುತ್ತಿರುವ ‘ವರಾಹಚಕ್ರಂ’ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ಇತ್ತೀಚೆಗಷ್ಟೇ ನಡೆಯಿತು. ದಶಕದ ಹಿಂದೆ ‘ಮನಸುಗಳ ಮಾತು ಮಧುರ’, ‘ಯುಗಪುರುಷ’, ‘ಗೌರೀಪುತ್ರ’ ಚಿತ್ರಗಳನ್ನು ನಿರ್ದೇಶಿಸಿದ್ದ ಮಂಜು ಮಸ್ಕಲ್‌ಮಟ್ಟಿ ಈ ಚಿತ್ರದೊಂದಿಗೆ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. 

‘ಬೆಂಗಳೂರಿನ ಅವ್ಯವಸ್ಥೆ, ಸಂಸ್ಕ್ರತಿಯ ಕಗ್ಗೊಲೆ, ದೌರ್ಜನ್ಯಗಳ ಕುರಿತು ಜಾಗೃತಿ ಮೂಡಿಸುವ ಕಥೆ ಹೊಂದಿರುವ ಚಿತ್ರ. ಪ್ರೇಮಾ ಅವರ ‘ನಮ್ಮೂರ ಮಂದಾರ ಹೂವೆ’ ಸಿನಿಮಾ ನೋಡಿ ನಾನು ನಿರ್ದೇಶಕನಾಗಬೇಕೆಂದು ಕನಸು ಕಂಡಿದ್ದೆ. ಈಗ ಅವರಿಗೇ ನಿರ್ದೇಶನ ಮಾಡುತ್ತಿರುವ ಖುಷಿಯಿದೆ’ ಎಂದರು ನಿರ್ದೇಶಕರು.

ವಿ.ನಾಗೇಂದ್ರ ಪ್ರಸಾದ್‌ ಈ ಚಿತ್ರಕ್ಕೆ ಸಾಹಿತ್ಯ, ಸಂಭಾಷಣೆ, ಸಂಗೀತ ಸಂಯೋಜನೆ ಮಾಡುವುದರ ಜೊತೆಗೆ ಪ್ರಮುಖ ಪಾತ್ರದಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾರೆ.

ಅರವಿಂದ್ ಗಗನ್ ಚಿತ್ರದ ನಿರ್ಮಾಪಕರು. ಶರತ್‌ಕುಮಾರ್ ಜಿ. ಅವರ ಛಾಯಾಗ್ರಹಣ, ಭಾರ್ಗವ ಅವರ ಸಂಕಲನವಿದೆ. ಬೆಂಗಳೂರು, ನೆಲ್ಲೂರು, ಪೊಲ್ಲಾಚ್ಚಿ, ಭಟ್ಕಳ, ಹಿರಿಯೂರು ಸೇರಿ ಹಲವಾರು ಸ್ಥಳಗಳಲ್ಲಿ ಚಿತ್ರೀಕರಣ ನಡೆಸುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT