ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬವಾಲ್‌‘ನಲ್ಲಿ ರೊಮ್ಯಾನ್ಸ್‌ ಮಾಡಲಿದ್ದಾರೆ ಜಾಹ್ನವಿ, ವರುಣ್‌ ಧವನ್‌

Last Updated 30 ಮಾರ್ಚ್ 2022, 11:56 IST
ಅಕ್ಷರ ಗಾತ್ರ

ಬಾಲಿವುಡ್‌ ನಟಿ ಜಾಹ್ನವಿ ಕಪೂರ್‌ ಅವರ ಹೊಸ ಸಿನಿಮಾ ಘೋಷಣೆಯಾಗಿದ್ದು, ಈ ಚಿತ್ರಕ್ಕೆ ನಟ ವರುಣ್‌ ಧವನ್‌ ನಾಯಕರಾಗಲಿದ್ದಾರೆ.

ಜಾಹ್ನವಿ ಮತ್ತು ವರುಣ್‌ ನೂತನ ‘ಬವಾಲ್‌‘ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದೆ. ಇದೇ ವಿಷಯವನ್ನು ವರುಣ್‌ ಹಾಗೂ ಜಾಹ್ನವಿ ಕೂಡ ಮಾಹಿತಿ ಹಂಚಿಕೊಂಡಿದ್ದಾರೆ.

ಬಾಲಿವುಡ್‌ನಲ್ಲಿ ಜಾಹ್ನವಿಗೆ ’ಧಡಕ್‌‘ ಸಿನಿಮಾ ಹೆಚ್ಚಿನ ಖ್ಯಾತಿ ತಂದುಕೊಟ್ಟಿತ್ತು. ಅದಾದ ಬಳಿಕ ಅವರು ನಟಿಸಿದ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡಲಿಲ್ಲ.

ಬಾಲಿವುಡ್‌ ಭರವಸೆಯ ನಿರ್ದೇಶಕ ನಿತೇಶ್ ತಿವಾರಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ಸಾಜಿದ್ ನಾಡಿಯಾದ್ವಾಲ ಬಂಡವಾಳ ಹಾಕುತ್ತಿದ್ದಾರೆ. ಬೇಸಿಗೆಯ ನಂತರ ಚಿತ್ರದ ಶೂಟಿಂಗ್‌ ಶುರುವಾಗಲಿದ್ದು, 2023ರ ಏಪ್ರಿಲ್ 7ಕ್ಕೆ ಚಿತ್ರ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT