ಭಾನುವಾರ, ನವೆಂಬರ್ 29, 2020
19 °C

ವಸಿಷ್ಠ ಸಿಂಹ ಹೊಸ ಚಿತ್ರ ತಿಂಗಳಾಂತ್ಯಕ್ಕೆ ಶುರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಿನ್ನೆಯಷ್ಟೇ ತಮ್ಮ ಹುಟ್ಟುಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಿಕೊಂಡಿರುವ ನಟ ವಸಿಷ್ಠ ಸಿಂಹ ಅವರು ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡಿದ್ದಾರೆ.

ಅವರ ಅಭಿನಯದ ಹೊಸ ಚಿತ್ರವೊಂದು ಸದ್ಯದಲ್ಲೇ ಸೆಟ್ಟೇರಲಿದ್ದು, ಈ ತಿಂಗಳಾಂತ್ಯಕ್ಕೆ ಮುಹೂರ್ತ ನಡೆಯಲಿದೆ. ಅದೇ ವೇಳೆಗೆ ಚಿತ್ರದ ಶೀರ್ಷಿಕೆಯೂ ಘೋಷಣೆಯಾಗಲಿದೆಯಂತೆ.

ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ ಈ‌ ಚಿತ್ರದ ಮುಖ್ಯ ಭೂಮಿಕೆಯಲ್ಲಿ ‌ಖ್ಯಾತ ನಟ ಕಿಶೋರ್ ಕೂಡ ಕಾಣಿಸಿಕೊಳುತ್ತಿದ್ದಾರೆ.

ಜನರತ್ನ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜನಾರ್ಧನ ವಿ. ಅವರು ಬಂಡವಾಳ ಹೂಡಲಿದ್ದಾರೆ. ಈ ಚಿತ್ರಕ್ಕೆ ವಚನ್ ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ. ನಿರ್ದೇಶಕ ಪವನ್ ಕುಮಾರ್ ಜತೆ ‘ಲೂಸಿಯಾ’ ಚಿತ್ರದಲ್ಲಿ ಸಹ ನಿರ್ದೇಶಕರಾಗಿ ವಚನ್ ಕಾರ್ಯನಿರ್ವಹಿಸಿದ್ದರು. ಇದು ಇವರಿಗೆ ಚೊಚ್ಚಲ ನಿರ್ದೇಶನದ ಚಿತ್ರ.

ಅನೂಪ್ ಸೀಳಿನ್ ಸಂಗೀತವಿರುವ ಈ ಚಿತ್ರಕ್ಕೆ ‘ಮಫ್ತಿ’ ಖ್ಯಾತಿಯ ನವೀನ್ ಕುಮಾರ್ ಐ. ಅವರ ಛಾಯಾಗ್ರಹಣ, ಹರೀಶ್ ಕೊಮ್ಮೆ ಅವರ ಸಂಕಲನವಿದೆ. ‘ಟಗರು’ ಖ್ಯಾತಿಯ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.