ಶನಿವಾರ, ಜನವರಿ 29, 2022
17 °C

ನಟ ಶಿವರಾಂ ಅಂತಿಮ ದರ್ಶನ ಪಡೆದ ಗಣ್ಯರು: ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶನಿವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ಶಿವರಾಂ (83) ಅಂತಿಮ ದರ್ಶನಕ್ಕಾಗಿ ಅವರ ಪಾರ್ಥಿವ ಶರೀರವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗಿದೆ.

ನಟಿ ತಾರಾ ಅನುರಾಧಾ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಟ ಸುಂದರ್‌ ರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜಯರಾಜ್, ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು.

ಈ ವೇಳೆ ಅಭಿಮಾನಿಗಳು, ಸಾರ್ವಜನಿಕರು ಕೂಡ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿ ನಟನಿಗೆ ನಮನ ಸಲ್ಲಿಸಿದರು.

ಬೆಳಿಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಶಿವರಾಂ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಇದನ್ನೂ ಓದಿ: ಮರೆಯಾದ 'ಸಂತ' ಶಿವರಾಮಣ್ಣ: ಚಿತ್ರರಂಗದ ಭಕ್ತಿಪರವಶ ಸಮನ್ವಯಕಾರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು