ಶುಕ್ರವಾರ, ಜನವರಿ 27, 2023
17 °C

ಬಾಲಿವುಡ್‌ನ ಹಿರಿಯ ನಟ ವಿಕ್ರಂ ಗೋಖಲೆ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ಪುಣೆ: ಕಿರುತೆರೆ ಮತ್ತು ಬಾಲಿವುಡ್‌ನ ಹಿರಿಯ ನಟ ವಿಕ್ರಂ ಗೋಖಲೆ(75) ಪುಣೆಯ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ಧಾರೆ ಎಂದು ಅವರ ಕುಟುಂಬ ವರ್ಗ ತಿಳಿಸಿದೆ. 

ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಬುಧವಾರ ಸಂಜೆ ಪುಣೆಯ ದೀನನಾಥ್‌ ಮಂಗೇಶ್ಕರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮಧ್ಯಾಹ್ನ ಅವರು ಮೃತಪಟ್ಟಿದ್ದಾರೆ.

ತಮ್ಮ ಸುದೀರ್ಘ ನಟನಾ ವೃತ್ತಿ ಜೀವನದಲ್ಲಿ ಗೋಖಲೆ, ಮರಾಠಿ ಕಿರುತೆರೆ ಮತ್ತು ಹಿಂದಿಯ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಅಮಿತಾಭ್ ಬಚ್ಚನ್ ಅವರ ಅಗ್ನಿಪಥ್, ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಮುಖ್ಯ ಭೂಮಿಕೆಯಲ್ಲಿರುವ ಸಂಜಯ್ ಲೀಲಾ ಬನ್ಸಾಲಿಯವರ ಹಮ್ ದಿಲ್ ದೇ ಚುಕೆ ಸನಮ್ ಮುಂತಾದ ಹಿಟ್ ಚಿತ್ರಗಳಲ್ಲಿ ಗೋಖಲೆ ನಟಿಸಿದ್ದಾರೆ.

ಇತ್ತೀಚಿನ, ಮಿಷನ್ ಮಂಗಲ್, ಹಿಚ್ಕಿ, ಐಯ್ಯಾರಿ, ಬ್ಯಾಂಗ್ ಬ್ಯಾಂಗ್, ದೇ ದನಾ ದನ್ ಮತ್ತು ಭೂಲ್ ಭುಲಯ್ಯಾ ಚಿತ್ರಗಳಲ್ಲೂ ಅವರು ನಟಿಸಿದ್ದರು.

1971ರಲ್ಲಿ ಅಮಿತಾಬ್ ಬಚ್ಚನ್ ಅವರ ಪರ್ವಾನಾ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಗೋಖಲೆ, 2010ರಲ್ಲಿ ಮರಾಠಿಯ ಅನುಮತಿ ಚಿತ್ರದ ನಟನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು. ಮರಾಠಿಯ ಆಘಾತ್ ಚಿತ್ರವನ್ನು ನಿರ್ದೇಶಿಸಿದ್ದರು.

ಈ ವರ್ಷ ತೆರೆಕಂಡ ಮರಾಠಿಯ ಗೋದಾವರಿ ಮತ್ತು ಹಿಂದಿಯ ನಿಕಮ್ಮಾ ಅವರು ಅಭಿನಯದ ಕೊನೆಯ ಚಿತ್ರಗಳಾಗಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು