ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ನಟಿ ಹೇಮಾ ಚೌಧರಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Published 20 ಡಿಸೆಂಬರ್ 2023, 11:09 IST
Last Updated 20 ಡಿಸೆಂಬರ್ 2023, 11:09 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೇಮಾ ಚೌಧರಿ ಅವರಿಗೆ ಮಿದುಳಿನಲ್ಲಿ ರಕ್ತ ಕಟ್ಟಿದ್ದು ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಇಂದು (ಬುಧವಾರ) ಸಂಜೆ ಅವರ ಪುತ್ರ ವಿದೇಶದಿಂದ ಆಗಮಿಸಲಿದ್ದಾರೆ ಎಂದು ಅವರ ಕುಟುಂಬದವರು ಹೇಳಿದ್ದಾರೆ. 

ಹೇಮಾ ಚೌಧರಿ ಅವರು 70ರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂನ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾಗಳು ಮಾತ್ರವಲ್ಲದೇ ಕನ್ನಡದ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT