ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ಹಿರಿಯ ನಟಿ ಲೀಲಾವತಿ

Published 14 ಅಕ್ಟೋಬರ್ 2023, 13:25 IST
Last Updated 14 ಅಕ್ಟೋಬರ್ 2023, 13:25 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರು ಇಂದು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾದರು.

ವಿಶೇಷವೆಂದರೆ ಡಿಸಿಎಂ, ತಮ್ಮ ಗೃಹ ಕಚೇರಿಯಿಂದ ಲೀಲಾವತಿ ಅವರು ಇದ್ದ ಸ್ಥಳಕ್ಕೇ ಬಂದು ಅವರ ಅಹವಾಲು ಸ್ವೀಕರಿಸಿದರು. ಲೀಲಾವತಿ ಅವರು ವಯೋಸಹಜವಾಗಿ ಅನಾರೋಗ್ಯದಿಂದ ಕಾರು ಬಿಟ್ಟು ಇಳಿಯಲು ಆಗಿರಲಿಲ್ಲ.

ಈ ಬಗ್ಗೆ X ತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ ಶಿವಕುಮಾರ್ ಅವರು, ‘ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಹಾಗೂ ಪುತ್ರ ವಿನೋದ್ ರಾಜ್ ಅವರು ತಮ್ಮ ಸ್ವಂತ ಹಣದಲ್ಲಿ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿರುವ ಆಸ್ಪತ್ರೆ ಉದ್ಘಾಟನೆಗೆ ಆಗಮಿಸುವಂತೆ ನನ್ನನ್ನು ಇಂದು ಗೃಹ ಕಚೇರಿಯಲ್ಲಿ ಭೇಟಿಯಾಗಿ ಆಹ್ವಾನಿಸಿದರು. ಸರ್ಕಾರದಿಂದ ಅವರಿಗೆ ಸಲ್ಲಬೇಕಾದ ಸೂಕ್ತ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿದೆ ಎಂದಿದ್ದಾರೆ.

ಲೀಲಾವತಿ ಅವರ ಆರೋಗ್ಯ ಬೇಗ ಸುಧಾರಿಸಲಿ ಎಂದು ಪ್ರಾರ್ಥನೆ ಮಾಡಿಕೊಂಡಿರುವುದಾಗಿ ಡಿಸಿಎಂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT