ಮಂಗಳವಾರ, 3 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಮೂಲದ ಹಿಂದಿ, ಮರಾಠಿ ಚಿತ್ರರಂಗದ ಖ್ಯಾತ ಹಿರಿಯ ನಟಿ ಸುಲೋಚನಾ ಲಾತ್ಕರ್ ನಿಧನ

ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟಿಯಾಗಿದ್ದ ಸುಲೋಚನಾ ಲಾತ್ಕರ್ ಅವರು ಭಾನುವಾರ ಸಂಜೆ ನಿಧನರಾಗಿದ್ದಾರೆ.
Published 4 ಜೂನ್ 2023, 15:43 IST
Last Updated 4 ಜೂನ್ 2023, 15:43 IST
ಅಕ್ಷರ ಗಾತ್ರ

ಮುಂಬೈ: ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟಿಯಾಗಿದ್ದ ಸುಲೋಚನಾ ಲಾತ್ಕರ್ ಅವರು ಭಾನುವಾರ ಸಂಜೆ ನಿಧನರಾಗಿದ್ದಾರೆ.

ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಮೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಡಕಾಳತಾ ಗ್ರಾಮದವರಾದ ಅವರು 1940 ರಲ್ಲಿ ಮರಾಠಿ ರಂಗಭೂಮಿ ಪ್ರವೇಶ ಮಾಡಿ ಆನಂತರ ಮರಾಠಿ ಚಿತ್ರರಂಗ, ಹಿಂದಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.

ಅವರು 50 ಮರಾಠಿ ಸಿನಿಮಾ, 250 ಹಿಂದಿ ಸಿನಿಮಾಗಳಲ್ಲಿ ಪ್ರಮುಖ ನಟರ ಜೊತೆ ನಟಿಸಿದ್ದಾರೆ. ಅವರ ನಿಧನಕ್ಕೆ ಅನೇಕ ನಟ–ನಟಿಯರು, ರಂಗಕರ್ಮಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸೋಮವಾರ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT