ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ವೈವಿಧ್ಯಮಯ ಪಾತ್ರಗಳ ‘ಅಮ್ಮ’ ಹಿರಿಯ ನಟಿ ಲೀಲಾವತಿ ನಿಧನ

Published 8 ಡಿಸೆಂಬರ್ 2023, 13:51 IST
Last Updated 8 ಡಿಸೆಂಬರ್ 2023, 13:51 IST
ಅಕ್ಷರ ಗಾತ್ರ

ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲೀಲಾವತಿ ಅವರಿಗೆ ನೆಲಮಂಗಲ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನುನೀಡಲಾಗುತ್ತಿತ್ತು. ಲೀಲಾವತಿ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದರು. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದರು. ಲೀಲಾವತಿಯವರ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT