ಸೋಮವಾರ, ಆಗಸ್ಟ್ 8, 2022
24 °C

ಸಿನಿಮಾ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ಸೋಮವಾರ ನಿಧನರಾದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೂರು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ತಂದೆ ಕೆ.ಸಿ.ಎನ್.ಗೌಡರ ಮಾರ್ಗದರ್ಶನದಲ್ಲಿ ಚಲನಚಿತ್ರ ನಿರ್ಮಾಣ, ಪ್ರದರ್ಶನ, ಚಿತ್ರ ವಿತರಣೆಯಲ್ಲಿ ಅಪಾರ ಅನುಭವಗಳಿಸಿದ್ದರು. ಬೆಂಗಳೂರಿನ ನವರಂಗ್, ಊರ್ವಶಿ ಮತ್ತು ದೊಡ್ಡಬಳ್ಳಾಪುರದ ರಾಜ್ ಕಮಲ್ ಚಿತ್ರಮಂದಿರದ ಮಾಲೀಕರಾಗಿದ್ದರು.

ಐವತ್ತಕ್ಕೂ ಹೆಚ್ಚು ಚಿತ್ರ ನಿರ್ಮಾಣ ಮಾಡಿದ್ದ ಇವರು ಸೆನ್ಸಾರ್ ಮಂಡಳಿ ಸದಸ್ಯರಾಗಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ದಾರಿ ತಪ್ಪಿದ ಮಗ, ಹುಲಿಯ ಹಾಲಿನ ಮೇವು, ಬಬ್ರುವಾಹನ ಮತ್ತಿತರ ಚಿತ್ರಗಳನ್ನು ನಿರ್ಮಿಸಿದ್ದರು. ಸುಮಾರು 500 ಚಿತ್ರಗಳ ವಿತರಣೆ ಮಾಡಿದ್ದರು.

ಪನೋರಮಾ ವಿಭಾಗ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಿತಿ ಹಾಗೂ ರಾಜ್ಯ ಚಲನಚಿತ್ರ ಪ್ರಶಸ್ತಿ ಸಮಿತಿ ತೀರ್ಪುಗಾರಾಗಿ, ಮುಂಬೈನ ಭಾರತೀಯ ಚಲನಚಿತ್ರ ಒಕ್ಕೂಟದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಡಾ.ರಾಜ್ ಕುಮಾರ್ ಆಪ್ತ ವಲಯದಲ್ಲಿ ಇದ್ದ ಚಂದ್ರಶೇಖರ್, ಶೇಷಾದ್ರಿಪುರದ ಶಿಕ್ಷಣ ದತ್ತಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತ ಸುಮಾರು ನೂರವೈತ್ತು ವಿದ್ಯಾರ್ಥಿಗಳಿಗೆ ಆಶ್ರಯವಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು