ಸೋಮವಾರ, ಜನವರಿ 17, 2022
18 °C

ತೆಲುಗು ನಟ ಕೈಕಾಲ ಸತ್ಯನಾರಾಯಣ ಆರೋಗ್ಯ ಸ್ಥಿತಿ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ತೆಲುಗು ಸಿನಿಮಾದ ಜನಪ್ರಿಯ ನಟ ಕೈಕಾಲ ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮನೆಯಲ್ಲಿ ಜಾರಿ ಬಿದ್ದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನವೆಂಬರ್ 20ರಂದು ಅವರ ಆರೋಗ್ಯ ಮತ್ತೆ ಕ್ಷಿಣಿಸಿದ ಪರಿಣಾಮ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬ ವರ್ಗದ ಮೂಲಗಳು ತಿಳಿಸಿವೆ. 

ಸದ್ಯ ಸತ್ಯನಾರಾಯಣ ಅವರಿಗೆ  ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚಿಕಿತ್ಸೆಗೆ ನಿಧಾನವಾಗಿ ಸ್ಪಂದನೆ ನೀಡುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಸತ್ಯನಾರಾಯಣ ಅವರು ಬೇಗ ಗುಣಮುಖರಾಗಲಿ ಎಂದು ಟಾಲಿವುಡ್‌ ಸೇರಿದಂತೆ ಚಿತ್ರರಂಗದ ಗಣ್ಯರು ಆಶಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಪ್ರಕಟಿಸಿದ್ದಾರೆ. 

ಓದಿ: ಹೊಸ ಹಾದಿ ತೋರಿಸಿ ಹೋದ ಅಪ್ಪು’: ಪುನೀತ್‌ ರಾಜ್‌ಕುಮಾರ್‌ಗೆ ರಂಗನಮನ

86 ವರ್ಷದ ಕೈಕಾಲ ಸತ್ಯನಾರಾಯಣ ಅವರು 800ಕ್ಕೂ ಹೆಚ್ಚು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪೋಷಕ ಪಾತ್ರಗಳಲ್ಲಿ ಅವರು ಹೆಚ್ಚು ನಟಿಸಿದ್ದಾರೆ.

ಓದಿ: ಲೈಗರ್ ಚಿತ್ರೀಕರಣದ ಮಧ್ಯೆ ಕುದುರೆ ಸವಾರಿ ಹೊರಟ ಅನನ್ಯಾ ಪಾಂಡೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು