ಗುರುವಾರ , ಮೇ 26, 2022
24 °C

ಸಿನಿಮಾ ಚಿತ್ರೀಕರಣದ ಬಿಡುವಿನ ವೇಳೆ ಕ್ರಿಕೆಟ್‌ ಆಡಿ ಆನಂದಿಸಿದ ನಟ ವಿಕ್ಕಿ ಕೌಶಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ನಟ ವಿಕ್ಕಿ ಕೌಶಲ್‌ ಅವರು ಸಿನಿಮಾ ಚಿತ್ರೀಕರಣದ ಬಿಡುವಿನ ವೇಳೆ ಚಿತ್ರತಂಡದೊಂದಿಗೆ ಕ್ರಿಕೆಟ್ ಆಡಿ ಆನಂದಿಸಿದ್ದಾರೆ.

ಇದೀಗ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲಕ್ಷ್ಮಣ್ ಉಟೇಕರ್ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ವಿಕ್ಕಿ ಕೌಶಲ್‌, ಸಾರಾ ಅಲಿ ಖಾನ್‌ ಅಭಿನಯಿಸುತ್ತಿದ್ದು, ಸಿನಿಮಾದ ಚಿತ್ರೀಕರಣ ಇಂದೋರ್‌ನಲ್ಲಿ ನಡೆಯುತ್ತಿದೆ.  

ಓದಿ... ಅಮೃತಾ ಹುಟ್ಟುಹಬ್ಬ: ಮುದ್ದಿನ ಮಗಳ ಫೋಟೊ ಹಂಚಿಕೊಂಡು ಶುಭ ಹಾರೈಸಿದ ನಟ ಪ್ರೇಮ್

ವಿಕ್ಕಿ, ಚಿತ್ರೀಕರಣದ ವೇಳೆ ಬಿಡುವು ಮಾಡಿಕೊಂಡು ದಿನಕ್ಕೆ ಎರಡು ಬಾರಿ ಕ್ರಿಕೆಟ್‌ ಆಡಲು ಸಮಯ ಮೀಸಲಿರಿಸಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಬ್ಯಾಟಿಂಗ್ ಮಾಡುತ್ತಿರುವ ವಿಕ್ಕಿ, ರನ್‌ ಗಳಿಸಲು ಓಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ವಿಕ್ಕಿ, ಕ್ರಿಕೆಟ್‌ ಆಡುತ್ತಿರುವ ವಿಡಿಯೊಗಳನ್ನು ಆಗಾಗ ತಮ್ಮ ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

2021ರ ಡಿ. 9ರಂದು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ವಿಕ್ಕಿ ಕೌಶಲ್‌ ಮತ್ತು ಕತ್ರಿನಾ ಕೈಫ್ ಅದ್ಧೂರಿಯಾಗಿ ವಿವಾಹವಾಗಿದ್ದರು.

ಸದ್ಯ ಕತ್ರಿನಾ ‘ಮೆರ್ರಿ ಕ್ರಿಸ್ಮಸ್’, ಸಲ್ಮಾನ್ ಖಾನ್ ಅಭಿನಯದ ‘ಟೈಗರ್ 3’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಓದಿ...

ಇನ್‌ಸ್ಟಾಗ್ರಾಂನಲ್ಲಿ ಸಂಡೇ ಸೆಲ್ಫಿ ಹಂಚಿಕೊಂಡ ಕರಿಷ್ಮಾ: ಅಭಿಮಾನಿಗಳಿಂದ ಮೆಚ್ಚುಗೆ

ಕೋವಿಡ್‌ನಿಂದ ಗುಣಮುಖ: ಸಹೋದರನ ತಿಥಿ ಕಾರ್ಯದಲ್ಲಿ ಭಾಗಿಯಾದ ನಟ ಮಹೇಶ್ ಬಾಬು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು