ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ‘ಛಾವಾ’ ಚಿತ್ರವನ್ನು ಗುರುತಿಸಿ ಪ್ರಶಂಸಿಸಿರುವುದಕ್ಕೆ ನಟ ವಿಕ್ಕಿ ಕೌಶಲ್ ಮತ್ತು ನಟಿ ರಶ್ಮಿಕಾ ಮಂದಣ್ಣ ಧನ್ಯವಾದ ತಿಳಿಸಿದ್ದಾರೆ.

ಶುಕ್ರವಾರ 98ನೇ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಮಹಾರಾಷ್ಟ್ರ ಮತ್ತು ಮುಂಬೈ, ಮರಾಠಿ ಮತ್ತು ಹಿಂದಿ ಚಿತ್ರರಂಗವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ದಿವೆ. ‘ಛಾವಾ’ ಸಿನೆಮಾ ಇದಕ್ಕೊಂದು ಉದಾಹರಣೆಯಾಗಿದ್ದು, ಎಲ್ಲೆಡೆ ಸುದ್ದಿ ಮಾಡುತ್ತಿದೆ’ ಎಂದು ಹೇಳಿದ್ದರು.

ಛಾವಾ ಸಿನೆಮಾದಲ್ಲಿ ಛತ್ರಪತಿ ಸಂಭಾಜಿ ಮಹಾರಾಜರ ಪಾತ್ರ ನಿರ್ವಹಿಸಿದ್ದ ವಿಕ್ಕಿ ಕೌಶಲ್ ಈ ಬಗ್ಗೆ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ‘ಇದು ಮಾತಿಗೂ ಮೀರಿದ ಗೌರವವಾಗಿದೆ. ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆಗಳು’ ಎಂದು ಹೇಳಿದ್ದಾರೆ.

ಸಂಭಾಜಿ ಮಹಾರಾಜರ ಪತ್ನಿ ಯೇಸುಬಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಶ್ಮಿಕಾ ಮಂದಣ್ಣ ಅವರು ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಇತ್ತೀಚೆಗೆ ಬಿಡುಗಡೆಗೊಂಡಿರುವ ‘ಛಾವಾ’ ಚಿತ್ರ ಇದುವೆರೆಗೆ ಸುಮಾರು ₹300 ಕೋಟಿ ಗಳಿಕೆ ಗಂಡಿದೆ. ಮಧ್ಯಪ್ರದೇಶ ಮತ್ತು ಗೋವಾದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯತಿ ನೀಡಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.