ಭಾನುವಾರ, ಏಪ್ರಿಲ್ 2, 2023
24 °C

ವಿಜಯ್‌ ದೇವರಕೊಂಡ ಅಭಿನಯದ ‘ಲೈಗರ್’ ಸಿನಿಮಾ: ಜುಲೈ 21ರಂದು ಟ್ರೈಲರ್‌ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ತೆಲುಗು ನಟ ವಿಜಯ್ ದೇವರಕೊಂಡ ಅಭಿನಯದ ಪ್ಯಾನ್ ಇಂಡಿಯಾ ‘ಲೈಗರ್’ ಸಿನಿಮಾದ ಟ್ರೈಲರ್‌ ಜುಲೈ 21ರಂದು ಬಿಡುಗಡೆಯಾಗಲಿದೆ. 

ಈ ಬಗ್ಗೆ ನಟ ವಿಜಯ್‌ ದೇವರಕೊಂಡ ಟ್ವೀಟ್‌ ಮಾಡಿದ್ದಾರೆ. ಜುಲೈ 20 ಹಾಗೂ 21ರಂದು ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಕಾರ್ಯಕ್ರಮಗಳು ಜರುಗಲಿವೆ. 21ರಂದು ಟ್ರೈಲರ್‌ ಬಿಡುಗಡೆಯಾಗಲಿದೆ. 

‘ಲೈಗರ್’ ಚಿತ್ರದಲ್ಲಿ ಬಾಕ್ಸಿಂಗ್ ಪಟುವಾಗಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ. ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಹಾಗೂ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಜೊತೆ ವಿಜಯ್‌ ನಟಿಸಿದ್ದಾರೆ.

‘ಪೋಕಿರಿ’ ಖ್ಯಾತಿಯ ಪುರಿ ಜಗನ್ನಾಥ್ ಚಿತ್ರವನ್ನು ನಿರ್ದೇಶಿಸಿದ್ದು, ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ.

ಈ ಚಿತ್ರ ಆಗಸ್ಟ್ 25ರಂದು ವಿಶ್ವದಾದ್ಯಂತ ತೆರೆಕಾಣಲಿದೆ. ತೆಲುಗು, ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಚಿತ್ರತಂಡ ಮಾಹಿತಿ ನೀಡಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು