ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಲೈಗರ್‌’ ಹೊಸ ಪೋಸ್ಟರ್ ಬಿಡುಗಡೆ: ವಿಭಿನ್ನ ಅವತಾರದಲ್ಲಿ ವಿಜಯ್‌ ದೇವರಕೊಂಡ

ಮುಂಬೈ: ತೆಲುಗು ನಟ ವಿಜಯ್ ದೇವರಕೊಂಡ ಅಭಿನಯದ ಪ್ಯಾನ್ ಇಂಡಿಯಾ ‘ಲೈಗರ್’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಲೈಗರ್’ ಚಿತ್ರದಲ್ಲಿ ಬಾಕ್ಸಿಂಗ್ ಪಟುವಾಗಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ. ಇದೀಗ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆಯಾಗಿದ್ದು, ಸಿನಿಪ್ರಿಯರಲ್ಲಿ ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ಪೋಸ್ಟರ್‌ನಲ್ಲಿ ವಿಜಯ್ ದೇವರಕೊಂಡ ಅವರ ದೇಹದ ಮೇಲೆ ಯಾವುದೇ ಬಟ್ಟೆ ಇಲ್ಲ. ಗುಲಾಬಿ ಹೂಗುಚ್ಛದಿಂದ ಸೊಂಟದ ಕೆಳಭಾಗವನ್ನು ಮುಚ್ಚಿಕೊಂಡಿದ್ದಾರೆ. ಈ ಪೋಸ್ಟರ್‌ ನೋಡಿರುವ ಅಭಿಮಾನಿಗಳು ವಿಭಿನ್ನ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಹಾಗೂ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಜೊತೆ ವಿಜಯ್‌ ನಟಿಸಿದ್ದಾರೆ.

‘ಪೋಕಿರಿ’ಖ್ಯಾತಿಯ ಪುರಿ ಜಗನ್ನಾಥ್ ಚಿತ್ರವನ್ನು ನಿರ್ದೇಶಿಸಿದ್ದು, ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ.

ಈ ಚಿತ್ರ ಆಗಸ್ಟ್ 25ರಂದು ವಿಶ್ವದಾದ್ಯಂತ ತೆರೆಕಾಣಲಿದೆ. ಜುಲೈ 10ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ತೆಲುಗು, ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT