ಶುಕ್ರವಾರ, ಮೇ 27, 2022
28 °C

’ಲೈಗರ್‌’ ವಿಜಯ್‌ ದೇವರಕೊಂಡ ಜತೆ ನಟಿಸುವಾಸೆ: ಬಾಲಿವುಡ್‌ ಗೊಂಬೆ ಸಾರಾ ಆಲಿ ಖಾನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ನಟಿ ಸಾರಾ ಆಲಿಖಾನ್‌ ಅವರಿಗೆ ಟಾಲಿವುಡ್‌ ನಟ ವಿಜಯ್‌ ದೇವರಕೊಂಡ ಮೇಲೆ ಆಸೆಯಂತೆ!

ಹೌದು, ಈ ಬಗ್ಗೆ ನಟಿ ಸಾರಾ ಆಲಿಖಾನ್‌ ಮನರಂಜನೆ ಟಿ.ವಿಯೊಂದಿಗೆ ಮಾತನಾಡಿದ್ದಾರೆ. ವಾಸ್ತವವಾಗಿ ಅವರಿಗೆ ವಿಜಯ್ ದೇವರಕೊಂಡ ಜೊತೆ ನಟಿಸುವ ಆಸೆಯಂತೆ! ಮತ್ತೇನು ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

’ಟಾಲಿವುಡ್‌ನಲ್ಲಿ ಟ್ರೆಂಡಿಂಗ್‌ ಇರುವ ನಟ ವಿಜಯ್‌ ಸಖತ್‌ ಕೂಲ್‌ ಆಗಿ ಇರುತ್ತಾರೆ, ಹಾಗೇ ಅವರು ಸಖತ್‌ ಹಾಟ್‌ ಕೂಡ’! ಇವರೊಂದಿಗೆ ಸಿನಿಮಾದಲ್ಲಿ ನಟಿಸುವ ಆಸೆ ಇದೆ ಎಂದು ಸಾರಾ ಹೇಳಿದ್ದಾರೆ. 

ಕೆಲ ತಿಂಗಳುಗಳ ಹಿಂದೆ ಬಾಲಿವುಡ್‌ ನಿರ್ದೇಶಕ ಕರಣ್‌ ಜೋಹರ್‌ ಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ಸಾರಾ ಆಲಿಖಾನ್‌ ಪಾರ್ಟಿ ಮಾಡಿದ್ದರು. ಈ ವೇಳೆ ನಿರ್ದೇಶಕ ಪುರಿ ಜಗನ್ನಾಥ್‌, ಚಾರ್ಮಿ, ಕಿಯಾರಾ, ಮಲ್ಹೋತ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.

ಆ ಪಾರ್ಟಿಯಲ್ಲಿ ವಿಜಯ್‌ ಅವರನ್ನು ಸಾರಾ ಸಿಕ್ಕಾಪಟ್ಟೆ ಹೊಗಳಿದ್ದರು. ಆ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.

ವಿಜಯ್‌ ದೇವರಕೊಂಡ ಅವರು ಟಾಲಿವುಡ್‌ನ ಮೂರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರು ಲೈಗರ್‌ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ಪುರಿ ಜಗನ್ನಾಥ್‌ ನಿರ್ದೇಶನ ಮಾಡುತ್ತಿದ್ದಾರೆ. 

ಓದಿ:  

ಪುರಿ ಜಗನ್ನಾಥ್, ಕರಣ್ ಜೋಹರ್, ಚಾರ್ಮಿ ಕೌರ್, ಅಪೂರ್ವ ಮೆಹ್ತಾ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಪರಿಕಲ್ಪನೆಯ ಈ ಸಿನಿಮಾ ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಅನನ್ಯಾ ಪಾಂಡೆ, ರಮ್ಯಾ ಕೃಷ್ಣನ್, ರೋನಿತ್ ರಾಯ್, ವಿಶು ರೆಡ್ಡಿ, ಆಲಿ, ಮಕರಂದ್ ದೇಶಪಾಂಡೆ, ಗೆಟಪ್ ಶೀನು ಈ ಚಿತ್ರದಲ್ಲಿ ನಟಿಸಿದ್ದಾರೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು