ರವಿಕಿರಣ್ ಕೋಲಾ ಅವರು ಈ ಸಿನಿಮಾದ ನಿರ್ದೇಶಕರಾಗಿದ್ದು, ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಜೊತೆಗೆ ಮೇ ತಿಂಗಳಿನಲ್ಲಿ ಚಿತ್ರೀಕರಣ ಆರಂಭಿಸಲು ಸಿದ್ಧತೆ ನಡೆಸಲಾಗಿದೆ.
ಸದ್ಯ, ಇನ್ನು ಹೆಸರಿಡದ ಚಿತ್ರದ ಮುಹೂರ್ತ ನೆರವೇರಿದ್ದು, ಮುಹೂರ್ತದ ಫೋಟೊಗಳನ್ನು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಈ ಸಿನಿಮಾಗೆ ಅಧಿಕೃತವಾಗಿ ಯಾವುದೇ ಶೀರ್ಷಿಕೆ ನೀಡಿಲ್ಲ.