ಮುಂಬೈ: ತೆಲುಗು ಚಿತ್ರರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಲೈಗರ್’ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಮುಂದಿನ ವರ್ಷದ ಆಗಸ್ಟ್ 25ರಂದು ಚಿತ್ರ ತೆರೆಗೆ ಅಪ್ಪಳಿಸಲಿದೆ ಎಂದು ಚಿತ್ರದ ನಿರ್ಮಾಪಕ ಕರಣ್ ಜೋಹರ್ ಗುರುವಾರ ಘೋಷಿಸಿದ್ದಾರೆ.
'ಪೋಕಿರಿ' ಖ್ಯಾತಿಯ ಪುರಿ ಜಗನ್ನಾಥ್ ಚಿತ್ರವನ್ನು ನಿರ್ದೇಶಿಸಿದ್ದು, ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ.
ಟ್ವಿಟರ್ ಮೂಲಕ ಕರಣ್ ಜೋಹರ್ ಚಿತ್ರದ ಬಿಡುಗಡೆ ದಿನಾಂಕ ಘೊಷಿಸಿದ್ದಾರೆ. ಅನನ್ಯಾ ಪಾಂಡೆ ಮತ್ತು ಬಾಕ್ಸಿಂಗ್ ದಂತಕಥೆ ಮೈಕ್ ಟೈಸನ್ ಸಹ ಅಭಿನಯಿಸಿದ್ದಾರೆ.
‘ಆ್ಯಕ್ಷನ್, ಥ್ರಿಲ್ಲರ್ ಮತ್ತು ಮ್ಯಾಡ್‌ನೆಸ್’ ಒಳಗೊಂಡ ಸಂಪೂರ್ಣ ಮನರಂಜನೆಯ ಚಿತ್ರ ಇದಾಗಿರಲಿದ್ದು, ಆಗಸ್ಟ್ 25, 2021ಕ್ಕೆ ಜಗತ್ತಿನಾದ್ಯಂತ ತೆರೆ ಕಾಣಲಿದೆ’ಎಂದು ಅವರು ಬರೆದುಕೊಂಡಿದ್ದಾರೆ.
ಡಿಸೆಂಬರ್ 31ಕ್ಕೆ ಚಿತ್ರದ ಮೊದಲ ಲುಕ್ ಹೊರಬೀಳಲಿದೆ ಎಂದೂ ಅವರು ತಿಳಿಸಿದ್ದಾರೆ.
ಸಿನಿಮಾದಲ್ಲಿ ವಿಜಯ್ ದೇವರಕೊಂಡ ಅವರು ಬಾಕ್ಸರ್ ಪಾತ್ರ ನಿರ್ವಹಿಸುತ್ತಿದ್ದು,ಟೈಸನ್ ಪಾತ್ರದ ಬಗ್ಗೆ ಚಿತ್ರ ತಂಡ ಯಾವುದೇ ಮಾಹಿತಿಯನ್ನು ಹೊರಹಾಕಿಲ್ಲ. ಆದರೆ, ಇಬ್ಬರೂ ಬಾಕ್ಸಿಂಗ್ ರಿಂಗ್‌ನಲ್ಲಿ ಮುಖಾಮುಖಿಯಾಗಲಿದ್ದಾರೆ ಎನ್ನುತ್ತಿವೆ ವರದಿಗಳು.
ಹಿಂದಿ, ತೆಲುಗು, ತಮಿಳು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಚಿತ್ರ ತೆರೆ ಕಾಣಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.