ಗೋವಾದಲ್ಲಿ ನಡೆದ 54ನೇ ಭಾರತದ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡು ಮೆಚ್ಚುಗೆ ಪಡೆದಿದ್ದ ಗಂಗಾಧರ್ ಸಾಲಿಮಠ ನಿರ್ದೇಶನದ ‘ಗ್ರೇ ಗೇಮ್ಸ್’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ವಿಜಯ ರಾಘವೇಂದ್ರ ನಟನೆಯ ಸಸ್ಪೆನ್ಸ್ ಡ್ರಾಮಾ ಶೈಲಿಯ ಈ ಸಿನಿಮಾ ಮೇ 10ರಂದು ರಿಲೀಸ್ ಆಗಲಿದೆ. ‘ಇಲ್ಲಿ ಚಿಂತನೆಗಳ ಪ್ರಚೋದನೆ ನಡೆಯುತ್ತದೆ. ಸರಿ ತಪ್ಪುಗಳ ಗ್ರಹಿಕೆಗಳಿಗೂ ಸವಾಲೆಸೆಯಲಾಗುತ್ತದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಆನ್‌ಲೈನ್ ಗೇಮಿಂಗ್ ಪೈಪೋಟಿ ಜೊತೆಗೆ ಮೆಟಾವರ್ಸ್‌ನ ಸಂಕೀರ್ಣತೆಗಳ ಬೆಸುಗೆ ಗ್ರೇ ಗೇಮ್ಸ್’ ಎಂದಿದೆ ಚಿತ್ರತಂಡ. ಸೆನ್ಸಾರ್ ಮಂಡಳಿಯಿಂದ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ದೊರಕಿದ್ದು, ಚಿತ್ರದಲ್ಲಿ ವಿಜಯ ರಾಘವೇಂದ್ರ ಜೊತೆಗೆ ಭಾವನಾ ರಾವ್, ಶ್ರುತಿ ಪ್ರಕಾಶ್, ಅಪರ್ಣಾ, ರವಿ ಭಟ್ ಮುಖ್ಯಭೂಮಿಕೆಯಲ್ಲಿದ್ದಾರೆ.

ಆನ್‌ಲೈನ್ ಗೇಮಿಂಗ್ ಹಿನ್ನೆಲೆಯಲ್ಲಿ ಸಾಗುವ ಈ ಸಿನಿಮಾದಲ್ಲಿ ಸೈಕಾಲಜಿಸ್ಟ್ ಆಗಿ ವಿಜಯ ರಾಘವೇಂದ್ರ ನಟಿಸಿದರೆ, ಸೈಬರ್ ಕ್ರೈಂ ತನಿಖಾಧಿಕಾರಿಯಾಗಿ ಭಾವನಾ ರಾವ್ ಕಾಣಿಸಿಕೊಂಡಿದ್ದಾರೆ. ವೃತ್ತಿಪರ ಗೇಮರ್ ಆಗಿ ಜೈ, ಚಿತ್ರನಟಿಯಾಗಿ ಶ್ರುತಿ ಪ್ರಕಾಶ್ ಸಿನಿಮಾದಲ್ಲಿದ್ದಾರೆ. ಆನಂದ್ ಮುಗದ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ವರುಣ್ ಡಿಕೆ ಛಾಯಾಚಿತ್ರಗ್ರಹಣ, ಜಗದೀಶ್ ಎನ್. ಸಂಕಲನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.