ಹೈದರಾಬಾದ್:ವಿಜಯ್ ದೇವರಕೊಂಡ ನಟನೆಯ ವರ್ಲ್ಡ್ ಫೇಮಸ್ ಲವರ್ ಚಿತ್ರದ ಟೀಸರ್ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
ಯುಟ್ಯೂಬ್‌ನಲ್ಲಿಬಿಡುಗಡೆಯಾಗಿ 22 ಗಂಟೆಗಳಲ್ಲೇ ಈ ಟೀಸರ್ ಅನ್ನು 60 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಮೂವರು ನಾಯಕಿಯರ ಜೊತೆ ರೊಮ್ಯಾನ್ಸ್ ಮಾಡಲಿದ್ದಾರಂತೆ!
ಕ್ರಾಂತಿ ಮಾಧವ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.ವಿಜಯ್‌ಗೆ ನಾಯಕಿಯರಾಗಿರಾಶಿ ಖನ್ನಾ,ಐಶ್ವರ್ಯಾ ರಾಜೇಶ್, ಇಸಬೆಲ್ಲಾ ಲೈಟ್ ನಟಿಸಿದ್ದಾರೆ.ಕೆ.ಎ.ವಲ್ಲಭ ಅವರ ನಿರ್ಮಾಣ ಮಾಡಿದ್ದು ಗೋಪಿ ಸುಂದರ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಈಗಾಗಲೇ‘ವರ್ಲ್ಡ್ ಫೇಮಸ್ ಲವರ್‘ ಸಿನಿಮಾದ ಫಸ್ಟ್‌ಬುಕ್ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.