ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಕ್ರಮ್ ವೇದಾ’ ಚಿತ್ರದ ಹಾಡು ನೋಡಿ: ಐಟಂ ಬಾಯ್‌ ಆದ ಹೃತಿಕ್‌

Last Updated 17 ಸೆಪ್ಟೆಂಬರ್ 2022, 11:25 IST
ಅಕ್ಷರ ಗಾತ್ರ

ಬೆಂಗಳೂರು: ಹೃತಿಕ್ ರೋಷನ್ ಮತ್ತು ಸೈಫ್ ಅಲಿ ಖಾನ್ ಅಭಿನಯದ ‘ವಿಕ್ರಮ್ ವೇದಾ’ ಚಿತ್ರದ ವಿಡಿಯೊ ಸಾಂಗ್‌ ಬಿಡುಗಡೆಯಾಗಿದೆ.

‘ಅಲ್ಕೊಒಲಿಯಾ‘ ಹಾಡು ಬಿಡುಗಡೆಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಕಂಡಿದೆ.

ಈ ಹಾಡಿನಲ್ಲಿ ಹೃತಿಕ್‌ ರೋಷನ್‌ ಐಟಂ ಬಾಯ್‌ ಆಗಿ ಕಾಣಿಸಿಕೊಂಡಿದ್ದಾರೆ. ಸಖತ್‌ ಡ್ಯಾನ್ಸ್‌ ಮಾಡುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಹಾಡು ಹೃತಿಕ್‌ ಅಭಿಮಾನಿಗಳಿಗೆ ಇಷ್ಟವಾಗಿದೆ.

ಕ್ರೈಮ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ, ಮೈನವಿರೇಳಿಸುವ ಆ್ಯಕ್ಷನ್‌ ಸೀಕ್ವೆನ್ಸ್‌ಗಳು, ಹೊಡೆದಾಟದ ದೃಶ್ಯಗಳಿರುವ ಈ ಸಿನಿಮಾ ಬಾಲಿವುಡ್‌ನಲ್ಲಿ ನಿರೀಕ್ಷೆ ಮೂಡಿಸಿದೆ. ಸ್ಟಾರ್‌ ನಟರಾದ ಸೈಫ್ ಹಾಗೂ ಹೃತಿಕ್ ಮುಖಾಮುಖಿಯಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲವನ್ನು ಹೆಚ್ಚಿಸಿದೆ.

‘ವಿಕ್ರಮ್‌ ವೇದ’ ತಮಿಳಿನ ರಿಮೇಕ್‌ ಚಿತ್ರ. ಮೂಲ ಚಿತ್ರವನ್ನು ನಿರ್ದೇಶಿಸಿದ ಪುಷ್ಕರ್ ಮತ್ತು ಗಾಯತ್ರಿ ಅವರೇ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸೆಪ್ಟೆಂಬರ್ 30ರಂದು ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಹೃತಿಕ್ ರೋಷನ್ ವೇದ ಪಾತ್ರದಲ್ಲಿ, ಸೈಫ್ ಅಲಿ ಖಾನ್ ವಿಕ್ರಮ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಭೂಷಣ್ ಕುಮಾರ್, ಎಸ್.ಶಶಿಕಾಂತ್ ಚಿತ್ರದ ನಿರ್ಮಾಪಕರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT