ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಕ್ರಾಂತ್‌ ರೋಣ ಚಿತ್ರ ಮೊದಲ ದಿನ ಗಳಿಸಿದ್ದೆಷ್ಟು? ಇಲ್ಲಿದೆ ಅಧಿಕೃತ ಮಾಹಿತಿ

ಅಕ್ಷರ ಗಾತ್ರ

ಬೆಂಗಳೂರು: ಕಿಚ್ಚ ಸುದೀಪ್‌ ಅಭಿನಯದ ವಿಕ್ರಾಂತ್‌ ರೋಣ ಚಿತ್ರವು ಬಾಕ್ಸ್‌ ಆಫೀಸ್‌ನಲ್ಲಿ ದೂಳೆಬ್ಬಿಸಿದೆ.

‘ವಿಕ್ರಾಂತ್‌ ರೋಣ’ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಕುರಿತು ಪ್ರಜಾವಾಣಿ ಜೊತೆ ಮಾತನಾಡಿದ ನಿರ್ಮಾಪಕ ಜಾಕ್‌ ಮಂಜು, ‘ವಿಶ್ವದಾದ್ಯಂತ 3,200ಕ್ಕೂ ಅಧಿಕ ತೆರೆಗಳಲ್ಲಿ ವಿಕ್ರಾಂತ್‌ ರೋಣ ಸಿನಿಮಾ ಬಿಡುಗಡೆಯಾಗಿದೆ. ಶನಿವಾರ(ಜುಲೈ 30) ಒಟ್ಟು ಗಳಿಕೆಯ ಅಧಿಕೃತ ಮಾಹಿತಿಯನ್ನು ನೀಡುತ್ತೇವೆ’ ಎಂದು ತಿಳಿಸಿದರು.

‘ಸದ್ಯ ನಮ್ಮ ಬಳಿ ಇರುವ ಮಾಹಿತಿಯಂತೆ ಮೊದಲ ದಿನ ಭಾರತದಲ್ಲೇ ₹20–₹22 ಕೋಟಿ ಗಳಿಕೆಯಾಗಿದೆ. ಕರ್ನಾಟಕದಲ್ಲಿ ₹13 ಕೋಟಿ ಕಲೆಕ್ಷನ್‌ ಆಗಿದೆ’ ಎಂದು ಮಂಜು ಮಾಹಿತಿ ನೀಡಿದರು.

ಅನೂಪ್‌ ಭಂಡಾರಿ ನಿರ್ದೇಶನದ ಚಿತ್ರಕ್ಕೆ ಸುದೀಪ್‌ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನಲ್ಲಿ ಡಬ್ಬಿಂಗ್‌ ಮಾಡಿದ್ದಾರೆ. ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌ ಸಹ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈ ಚಿತ್ರದ ಮುಖಾಂತರ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದು, ರಕೇಲ್‌ ಡಿಕೋಸ್ಟ ಉರ್ಫ್‌ ‘ಗಡಂಗ್‌ ರಕ್ಕಮ್ಮ’ನಾಗಿ ವಿಶೇಷ ಪಾತ್ರದಲ್ಲಿ ತೆರೆ ಮೇಲೆ ಕಾಣಿಕೊಂಡಿದ್ದಾರೆ..

ಹಿಂದಿ ಹಾಗೂ ಇತರ ಭಾಷೆಗಳಲ್ಲಿ ಪ್ರಮೋಷನ್ಸ್‌ ಸೇರಿ ಚಿತ್ರದ ಬಜೆಟ್‌ ₹100 ಕೋಟಿ ದಾಟಿದೆ ಎಂದು ಇತ್ತೀಚೆಗೆ ಚಿತ್ರದ ನಿರ್ಮಾಪಕ ಜಾಕ್‌ ಮಂಜು ತಿಳಿಸಿದ್ದರು. ಜೀ ಸ್ಟುಡಿಯೊಸ್‌ ಹಾಗೂ ಕಿಚ್ಚ ಕ್ರಿಯೇಷನ್ಸ್‌ನಡಿ ಜಾಕ್‌ ಮಂಜು ಅವರ ಶಾಲಿನಿ ಆರ್ಟ್ಸ್‌ ಈ ಚಿತ್ರವನ್ನು ವಿತರಣೆ ಮಾಡಲಿದೆ. ಚಿತ್ರಕ್ಕೆ ಬಿ.ಅಜನೀಶ್‌ ಲೋಕನಾಥ್‌ ಸಂಗೀತವಿದೆ.

ವೀರೇಂದ್ರ ಹೆಗ್ಗಡೆ ಭೇಟಿಯಾದ ಸುದೀಪ್

ಸಿನಿಮಾ ಬಿಡುಗಡೆಯಾದ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಸುದೀಪ್‌ ಭೇಟಿಯಾಗಿದ್ದರು. ಮುಂದಿನ ದಿನಗಳಲ್ಲಿ ವಿಕ್ರಾಂತ್‌ ರೋಣ ಸಿನಿಮಾ ನೋಡುವುದಾಗಿ ಅವರು ತಿಳಿಸಿದ್ದಾರೆ. ಸುದೀಪ್‌ ಅವರು ನಟಿಸಿದ್ದ ಮುಕುಂದ ಮುರಾರಿ ಸಿನಿಮಾ ನೋಡಿದ ನೆನಪುಗಳನ್ನು ಇದೇ ವೇಳೆ ಅವರು ಬಿಚ್ಚಿಟ್ಟರು ಎಂದು ಜಾಕ್‌ ಮಂಜು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT