ಮಂಗಳವಾರ, ಜನವರಿ 25, 2022
24 °C

ಕಿಚ್ಚ ಸುದೀಪ್‌ ‘ವಿಕ್ರಾಂತ್‌ ರೋಣ’ ಬಿಡುಗಡೆ ದಿನಾಂಕ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ಕಿಚ್ಚ ಸುದೀಪ್‌ ನಟನೆಯ, ಅನೂಪ್‌ ಭಂಡಾರಿ ನಿರ್ದೇಶನದ ಪ್ಯಾನ್ ಇಂಡಿಯಾ ಬಿಗ್‌ಬಜೆಟ್‌ ಸಿನಿಮಾ ‘ವಿಕ್ರಾಂತ್‌ ರೋಣ’ 2022ರ ಫೆ.24ಕ್ಕೆ ತೆರೆಕಾಣಲಿದೆ. 

ಮಂಗಳವಾರ ಚಿತ್ರತಂಡವು ರಿಲೀಸ್‌ ದಿನಾಂಕವನ್ನು ಘೋಷಿಸಿದೆ. ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವು ‘3ಡಿ’ ಯಲ್ಲಿ ತೆರೆಕಾಣಲಿದೆ. ಚಿತ್ರದಲ್ಲಿ ಸ್ವತಃ ಸುದೀಪ್‌ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನ ಡಬ್ಬಿಂಗ್‌ ಮಾಡಿದ್ದಾರೆ. ಕಳೆದ ಆಗಸ್ಟ್‌ 19ರಂದೇ ತೆರೆಯ ಮೇಲೆ ಬರಬೇಕಿದ್ದ ಈ ಸಿನಿಮಾ, ಕೋವಿಡ್‌ ಲಾಕ್‌ಡೌನ್‌ ಕಾರಣದಿಂದ ಮುಂದೂಡಲ್ಪಟ್ಟಿತ್ತು. ದುಬೈನಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್‌ ಖಲೀಫಾ ಮೇಲೆ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿ, ಚಿತ್ರವು ವಿಶ್ವದ ಗಮನಸೆಳೆದಿತ್ತು. 

ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈ ಚಿತ್ರದ ಮುಖಾಂತರ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದು, ರಕೇಲ್‌ ಡಿಕೋಸ್ಟ ಉರ್ಫ್‌ ‘ಗಡಂಗ್‌ ರಕ್ಕಮ್ಮ’ನಾಗಿ ವಿಶೇಷ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಿದ್ದಾರೆ. ಹಿಂದಿ ಹಾಗೂ ಇತರೆ ಭಾಷೆಯಲ್ಲಿ ಪ್ರಮೋಷನ್ಸ್‌ ಸೇರಿ ಚಿತ್ರದ ಬಜೆಟ್‌ ₹100 ಕೋಟಿ ದಾಟಿದೆ ಎಂದು ಇತ್ತೀಚೆಗೆ ಚಿತ್ರದ ನಿರ್ಮಾಪಕ ಜಾಕ್‌ ಮಂಜು ತಿಳಿಸಿದ್ದರು. ಜೀ ಸ್ಟೂಡಿಯೊಸ್‌ ಹಾಗೂ ಕಿಚ್ಚ ಕ್ರಿಯೇಷನ್ಸ್‌ನಡಿ ಜಾಕ್‌ ಮಂಜು ಅವರ ಶಾಲಿನಿ ಆರ್ಟ್ಸ್‌ ಈ ಚಿತ್ರವನ್ನು ವಿತರಣೆ ಮಾಡಲಿದೆ. ಚಿತ್ರಕ್ಕೆ ಬಿ.ಅಜನೀಶ್‌ ಲೋಕನಾಥ್‌ ಸಂಗೀತವಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು