ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Vikrant Rona Trailer: ವಿಕ್ರಾಂತ್ ರೋಣ ಟ್ರೈಲರ್ ಬಿಡುಗಡೆ– ಮೋಡಿ ಮಾಡಿದ ಸುದೀಪ್

ಅಕ್ಷರ ಗಾತ್ರ

ಬೆಂಗಳೂರು:ನಟ ಕಿಚ್ಚ ಸುದೀಪ್‌ ನಟನೆಯ, ಅನೂಪ್‌ ಭಂಡಾರಿ ನಿರ್ದೇಶನದ ಪ್ಯಾನ್ ಇಂಡಿಯಾ ಬಿಗ್‌ ಬಜೆಟ್‌ ಸಿನಿಮಾ ‘ವಿಕ್ರಾಂತ್‌ ರೋಣ’ ಟ್ರೈಲರ್ ಲಾಂಚ್ ಆಗಿದೆ.

ಲಹರಿ ಮ್ಯೂಸಿಕ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಹವಾ ಸೃಷ್ಟಿಸಿದೆ. ಕನ್ನಡ, ತಮಿಳು, ತೆಲುಗು, ಮಲೆಯಾಳಂ, ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಟ್ರೈಲರ್ ನೋಡಲು ಲಭ್ಯವಿದೆ.ಚಿತ್ರದ ಟೀಸರ್ 2 ನಿಮಿಷ ಇದ್ದು, ಸಿನಿಮಾ ಆಸಕ್ತರಿಗೆ ಕುತೂಹಲ ಮೂಡವಂತೆ ಮಾಡಿದೆ.

ಚಿತ್ರದಲ್ಲಿ ಸುದೀಪ್ ತನಿಖಾ ಪೊಲೀಸ್ ಆಗಿ ಕಾಣಿಸಿಕೊಂಡಿದ್ದು ಅವರ ಪಾತ್ರ ಎಲ್ಲರನ್ನೂ ಸೆಳೆಯುತ್ತಿದೆ. ಸುದೀಪ್‌ಗೆ ಅನೇಕ ನಟ–ನಟಿಯರು, ತಂತ್ರಜ್ಞರು, ನಿರ್ಮಾಪಕರು ಶುಭ ಕೋರಿದ್ದಾರೆ.

ಈ ಚಿತ್ರ ಟೀಸರ್, ಪೋಸ್ಟರ್‌ಗಳ ಮೂಲಕ ಈಗಾಗಲೇ ಸದ್ದು ಮಾಡಿತ್ತು. ಫೆ.24ರಂದು ತೆರೆ ಕಾಣಬೇಕಿದ್ದ ಚಿತ್ರದ ಬಿಡುಗಡೆ ಕೋವಿಡ್‌ ಸೃಷ್ಟಿಸಿದ ಪ್ರತಿಕೂಲ ಪರಿಸ್ಥಿತಿ, ನಿಯಮಾವಳಿಗಳ ಇತಿಮಿತಿಗಳಿಂದಾಗಿ ಜುಲೈ 28 ಕ್ಕೆ 3ಡಿಯಲ್ಲಿ ಬರುತ್ತಿದೆ.

ಸುದೀಪ್‌ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನಲ್ಲಿ ಡಬ್ಬಿಂಗ್‌ ಮಾಡಿದ್ದಾರೆ. ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌ ಸಹ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈ ಚಿತ್ರದ ಮುಖಾಂತರ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದು, ರಕೇಲ್‌ ಡಿಕೋಸ್ಟ ಉರ್ಫ್‌ ‘ಗಡಂಗ್‌ ರಕ್ಕಮ್ಮ’ನಾಗಿ ವಿಶೇಷ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಹಿಂದಿ ಹಾಗೂ ಇತರ ಭಾಷೆಗಳಲ್ಲಿ ಪ್ರಮೋಷನ್ಸ್‌ ಸೇರಿ ಚಿತ್ರದ ಬಜೆಟ್‌ ₹100 ಕೋಟಿ ದಾಟಿದೆ ಎಂದು ಇತ್ತೀಚೆಗೆ ಚಿತ್ರದ ನಿರ್ಮಾಪಕ ಜಾಕ್‌ ಮಂಜು ತಿಳಿಸಿದ್ದರು. ಜೀ ಸ್ಟುಡಿಯೊಸ್‌ ಹಾಗೂ ಕಿಚ್ಚ ಕ್ರಿಯೇಷನ್ಸ್‌ನಡಿ ಜಾಕ್‌ ಮಂಜು ಅವರ ಶಾಲಿನಿ ಆರ್ಟ್ಸ್‌ ಈ ಚಿತ್ರವನ್ನು ವಿತರಣೆ ಮಾಡಲಿದೆ. ಚಿತ್ರಕ್ಕೆ ಬಿ.ಅಜನೀಶ್‌ ಲೋಕನಾಥ್‌ ಸಂಗೀತವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT