ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀ 5ನಲ್ಲಿ ‘ವಿಕ್ರಾಂತ್‌ ರೋಣ‘ ನೋಡಿದವರು 50 ಕೋಟಿ ಜನ

Last Updated 4 ಸೆಪ್ಟೆಂಬರ್ 2022, 8:15 IST
ಅಕ್ಷರ ಗಾತ್ರ

ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ಗೆ ಜೀ5 ಒಟಿಟಿಯಲ್ಲಿ ಭರ್ಜರಿಯಾಗಿ ವೀಕ್ಷಿಸಲ್ಪಟ್ಟಿದೆ. ಪ್ರಸಾರ ಶುರುವಾದ 24 ಗಂಟೆಗಳಲ್ಲಿ 50 ಕೋಟಿ ಜನ ವೀಕ್ಷಿಸಿದ್ದಾರೆ ಎಂದು ಚಿತ್ರತಂಡ ಹೇಳಿದೆ.

ಜುಲೈ 28ರಂದು ಈ ಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. 3ಡಿಯಲ್ಲಿ ಬಿಡುಗಡೆಯಾದ ಸಿನಿಮಾವಿದು. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಚಿತ್ರದಲ್ಲಿ ಜಾಕ್ವೆಲಿನ್ ಫೆರ್ನಾಂಡಿಸ್, ಅನೂಪ್ ಭಂಡಾರಿ, ನೀತಾ ಆಶೋಕ್ ಸೇರಿದಂತೆ ಹಲವರು ಅಭಿನಯಿಸಿದ್ದರು. ಜಾಕ್ ಮಂಜು ಈ ಚಿತ್ರ ನಿರ್ಮಿಸಿದ್ದರು.

ಅದ್ಧೂರಿ ಸೆಟ್ ನಲ್ಲಿ ಚಿತ್ರೀಕರಿಸಿದ್ದ ‘ರಾ...ರಾ... ರಕ್ಕಮ್ಮ’ ಹಾಡು ಹಿಟ್ ಆಗಿತ್ತು. ಬಿ. ಅಜನೀಶ್ ಲೋಕನಾಥ್ ಸಂಗೀತವಿದ್ದ ಎಲ್ಲಾ ಹಾಡುಗಳು ಪ್ರೇಕ್ಷಕರ ಗಮನ ಸೆಳೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT