ನಟ ಕಿಚ್ಚ ಸುದೀಪ್ ನಟನೆಯ, ಅನೂಪ್ ಭಂಡಾರಿ ನಿರ್ದೇಶನದ ಪ್ಯಾನ್ ಇಂಡಿಯಾ ಬಿಗ್‌ಬಜೆಟ್ ಸಿನಿಮಾ ‘ವಿಕ್ರಾಂತ್ ರೋಣ’ ಅದ್ಧೂರಿಯಾಗಿ ತೆರೆಯ ಮೇಲೆ ಬರಲು ಸಜ್ಜಾಗಿದ್ದು, ಚಿತ್ರದ ರಿಲೀಸ್ ದಿನಾಂಕವನ್ನು ಚಿತ್ರತಂಡವು ಡಿ.7ರಂದು ಬೆಳಗ್ಗೆ 11.05ಕ್ಕೆ ಘೋಷಿಸಲಿದೆ.

ನಿರೂಪ್ ಭಂಡಾರಿ ಹಾಗೂ ನೀತಾ ಅಶೋಕ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವು ‘3ಡಿ’ ಯಲ್ಲಿ ತೆರೆಕಾಣಲಿದೆ. ಚಿತ್ರದಲ್ಲಿ ಸ್ವತಃ ಸುದೀಪ್ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನ ಡಬ್ಬಿಂಗ್ ಮಾಡಿದ್ದಾರೆ. ಕಳೆದ ಆಗಸ್ಟ್ 19ರಂದೇ ತೆರೆಯ ಮೇಲೆ ಬರಬೇಕಿದ್ದ ಈ ಸಿನಿಮಾ, ಕೋವಿಡ್ ಲಾಕ್‌ಡೌನ್ ಕಾರಣದಿಂದ ಮುಂದೂಡಲ್ಪಟ್ಟಿತ್ತು. ದುಬೈನಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿ, ಚಿತ್ರವು ವಿಶ್ವದ ಗಮನಸೆಳೆದಿತ್ತು.

‘ಭಾಗಿ–2’ ಚಿತ್ರದಲ್ಲಿ ‘ಏಕ್ ದೊ ತೀನ್’, ‘ಹೌಸ್‌ಫುಲ್’ನಲ್ಲಿ ‘ಆಪ್ ಕ್ಯಾ ಹೋಗ’ ಮುಂತಾದ ಐಟಂ ಹಾಡಿನಲ್ಲಿ ಮೈಬಳುಕಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈ ಚಿತ್ರದ ಮುಖಾಂತರ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದು,ರಕೇಲ್ ಡಿಕೋಸ್ಟ ಉರ್ಫ್ ‘ಗಡಂಗ್ ರಕ್ಕಮ್ಮ’ನಾಗಿ ವಿಶೇಷ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಿದ್ದಾರೆ.

ಹಿಂದಿ ಹಾಗೂ ಇತರೆ ಭಾಷೆಯಲ್ಲಿ ಪ್ರಮೋಷನ್ಸ್ ಸೇರಿ ಚಿತ್ರದ ಬಜೆಟ್ ₹100 ಕೋಟಿ ದಾಟಿದೆ ಎಂದು ಇತ್ತೀಚೆಗೆ ನಿರ್ಮಾಪಕ ಜಾಕ್ ಮಂಜು ತಿಳಿಸಿದ್ದರು. ಚಿತ್ರಕ್ಕೆ ಒಟಿಟಿಯಿಂದ ಬೇಡಿಕೆ ಬಂದಿದ್ದು, ಚಿತ್ರಮಂದಿರದಲ್ಲಿ ಬಿಡುಗಡೆಯಾದ ಮೂರು ವಾರಗಳ ಬಳಿಕ ಒಟಿಟಿಗೆ ನೀಡುವುದಕ್ಕೆ ಸುದೀಪ್ ನಿರ್ಧರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.