ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಚ್ಚ ಸುದೀಪ್ ‘ವಿಕ್ರಾಂತ್‌ ರೋಣ’ ಬಿಡುಗಡೆ ಮತ್ತೆ ಮುಂದಕ್ಕೆ

Last Updated 27 ಜನವರಿ 2022, 13:39 IST
ಅಕ್ಷರ ಗಾತ್ರ

ನಟ ಕಿಚ್ಚ ಸುದೀಪ್‌ ನಟನೆಯ, ಅನೂಪ್‌ ಭಂಡಾರಿ ನಿರ್ದೇಶನದ ಪ್ಯಾನ್ ಇಂಡಿಯಾ ಬಿಗ್‌ ಬಜೆಟ್‌ ಸಿನಿಮಾ ‘ವಿಕ್ರಾಂತ್‌ರೋಣ’ ಬಿಡುಗಡೆಯ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ. ಫೆ.24ರಂದು ತೆರೆ ಕಾಣಬೇಕಿದ್ದ ಚಿತ್ರದ ಬಿಡುಗಡೆ ಕೋವಿಡ್‌ ಸೃಷ್ಟಿಸಿದ ಪ್ರತಿಕೂಲ ಪರಿಸ್ಥಿತಿ, ನಿಯಮಾವಳಿಗಳ ಇತಿಮಿತಿಯಿಂದಾಗಿ ಮುಂದಕ್ಕೆ ಹೋಗಿದೆ.

‘ಭಾರತದ ಮೊದಲ ಸಾಹಸಮಯಿ ನಾಯಕನನ್ನು ಪ್ರಪಂಚಕ್ಕೆ ಪರಿಚಯಿಸುವ ಹೊಸ ದಿನಾಂಕವನ್ನು ಶೀಘ್ರ ತಿಳಿಸುತ್ತೇವೆ’ ಎಂದು ಚಿತ್ರತಂಡ ಪ್ರಕಟಣೆಯಲ್ಲಿ ಹೇಳಿದೆ.

ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವು ‘3ಡಿ’ಯಲ್ಲಿ ತೆರೆಕಾಣಲಿದೆ. ಸುದೀಪ್‌ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನ ಡಬ್ಬಿಂಗ್‌ ಮಾಡಿದ್ದಾರೆ. ಕಳೆದ ಆಗಸ್ಟ್‌ 19ರಂದೇ ತೆರೆಯ ಮೇಲೆ ಬರಬೇಕಿದ್ದ ಈ ಸಿನಿಮಾ, ಕೋವಿಡ್‌ ಲಾಕ್‌ಡೌನ್‌ ಕಾರಣದಿಂದ ಮುಂದೂಡಲ್ಪಟ್ಟಿತ್ತು.

ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈ ಚಿತ್ರದ ಮುಖಾಂತರ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದು,ರಕೇಲ್‌ ಡಿಕೋಸ್ಟ ಉರ್ಫ್‌ ‘ಗಡಂಗ್‌ ರಕ್ಕಮ್ಮ’ನಾಗಿ ವಿಶೇಷ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಹಿಂದಿ ಹಾಗೂ ಇತರ ಭಾಷೆಗಳಲ್ಲಿ ಪ್ರಮೋಷನ್ಸ್‌ ಸೇರಿ ಚಿತ್ರದ ಬಜೆಟ್‌ ₹100 ಕೋಟಿ ದಾಟಿದೆ ಎಂದು ಇತ್ತೀಚೆಗೆ ಚಿತ್ರದ ನಿರ್ಮಾಪಕ ಜಾಕ್‌ ಮಂಜು ತಿಳಿಸಿದ್ದರು. ಜೀ ಸ್ಟುಡಿಯೊಸ್‌ ಹಾಗೂ ಕಿಚ್ಚ ಕ್ರಿಯೇಷನ್ಸ್‌ನಡಿ ಜಾಕ್‌ ಮಂಜು ಅವರ ಶಾಲಿನಿ ಆರ್ಟ್ಸ್‌ ಈ ಚಿತ್ರವನ್ನು ವಿತರಣೆ ಮಾಡಲಿದೆ. ಚಿತ್ರಕ್ಕೆ ಬಿ.ಅಜನೀಶ್‌ ಲೋಕನಾಥ್‌ ಸಂಗೀತವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT