ಭಾನುವಾರ, ಜೂನ್ 26, 2022
26 °C

ವಿಕ್ರಾಂತ್‌ ರೋಣದ ಮೊದಲ ಹಾಡು ಬಿಡುಗಡೆ: ರ..ರ...ರಕ್ಕಮ್ಮನ ಜೊತೆ ಕಿಚ್ಚನ ಹೆಜ್ಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಿಚ್ಚ ಸುದೀಪ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಜುಲೈ 28ಕ್ಕೆ ಬಿಡುಗಡೆಯಾಗಲಿದ್ದು, ಚಿತ್ರದ ಪ್ರಚಾರವನ್ನು ಆರಂಭಿಸಿರುವ ಚಿತ್ರತಂಡ ಮೊದಲ ಲಿರಿಕಲ್‌ ಹಾಡು ‘ರ..ರ.ರಕ್ಕಮ್ಮ’ ರಿಲೀಸ್‌ ಮಾಡಿದೆ.

‘ದಿ ಕ್ವೀನ್‌ ಆಫ್‌ ಗುಡ್‌ಟೈಮ್ಸ್‌ ಗಡಂಗ್‌ ರಕ್ಕಮ್ಮ’ನಾಗಿ ಸುದೀಪ್‌ ಜೊತೆಗೆ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ಹೆಜ್ಜೆ ಹಾಕಿದ್ದು, ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಯುಟ್ಯೂಬ್‌ನಲ್ಲಿ ಹಾಡು ಸದ್ದು ಆರಂಭಿಸಿದೆ. ಬಿ.ಅಜನೀಶ್‌ ಲೋಕನಾಥ್‌ ಸಂಗೀತ ಕೇಳುಗರನ್ನು ಕುಂತಲ್ಲೇ ಕುಣಿಸಿದೆ. ಅನೂಪ್‌ ಭಂಡಾರಿ ಸಾಹಿತ್ಯ ಈ ಹಾಡಿಗಿದ್ದು, ಜಾನಿ ಮಾಸ್ಟರ್‌ ಕಲಾವಿದರಿಂದ ಹೆಜ್ಜೆ ಹಾಕಿಸಿದ್ದಾರೆ. ವಿಲಿಯಂ ಡೇವಿಡ್‌ ಕ್ಯಾಮೆರಾ ಕೈಚಳಕ ಈ ಸಿನಿಮಾಗಿದೆ. ಹಾಡಿನ ಸಾಹಿತ್ಯ ಹಾಗೂ ಸಂಗೀತಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ.  

ಅನೂಪ್‌ ಭಂಡಾರಿ ನಿರ್ದೇಶನದಈ ಸಿನಿಮಾ ಮೂಲಕ ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಹೆಜ್ಜೆ ಇಡುತ್ತಿದ್ದಾರೆ. ರಕೇಲ್‌ ಡಿಕೋಸ್ಟ ಉರ್ಫ್‌ ‘ಗಡಂಗ್‌ ರಕ್ಕಮ್ಮ’ನಾಗಿ ತೆರೆ ಮೇಲೆ ಅವರು ಕಾಣಿಸಿಕೊಂಡಿದ್ದಾರೆ. ಈ ಪ್ಯಾನ್ ಇಂಡಿಯಾ ಬಿಗ್‌ಬಜೆಟ್‌ ಚಿತ್ರದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕುವುದಷ್ಟೇ ಅಲ್ಲ ವಿಶೇಷ ಪಾತ್ರದಲ್ಲೂ ಜಾಕ್ವೆಲಿನ್‌ ಕಾಣಿಸಿಕೊಂಡಿದ್ದಾರೆ. ಜಾನಿ ಮಾಸ್ಟರ್‌ ನೃತ್ಯ ನಿರ್ದೇಶನದಲ್ಲಿ 300 ಡ್ಯಾನ್ಸರ್‌ ನಡುವೆ ಜಾಕ್ವೆಲಿನ್‌ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗಾಗಿಯೇ ನಿರ್ಮಾಪಕ ಜಾಕ್‌ ಮಂಜು ಅವರು ಸುಮಾರು ₹5 ಕೋಟಿ ಖರ್ಚು ಮಾಡಿದ್ದಾರೆ. 

ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವು ‘3ಡಿ’ ಯಲ್ಲಿ ತೆರೆಕಾಣಲಿದೆ. ಸ್ವತಃ ಸುದೀಪ್‌ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನ ಡಬ್ಬಿಂಗ್‌ ಮಾಡಿದ್ದಾರೆ. ಚಿತ್ರಕ್ಕೆ ಒಟಿಟಿ ವೇದಿಕೆಯಿಂದಲೂ ಸುಮಾರು ₹90 ಕೋಟಿಯರೆಗೆ ಆಫರ್‌ ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು