ದುನಿಯಾ ವಿಜಯ್ ಪುತ್ರಿ ಮೋನಿಷಾ ವಿಜಯ್ ಕುಮಾರ್ ನಟಿಸುತ್ತಿರುವ ಚೊಚ್ಚಲ ಸಿನಿಮಾ ಇದಾಗಿದ್ದು, ‘ಭೀಮ’ ಯಶಸ್ಸಿನ ಬೆನ್ನಲ್ಲೇ ವಿಜಯ್ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ. ‘ಪೆಪೆ’ ಸಿನಿಮಾ ತೆರೆಕಂಡ ಬೆನ್ನಲ್ಲೇ ವಿನಯ್ ನಟನೆಯ ಹೊಸ ಸಿನಿಮಾ ಘೋಷಣೆಯಾಗಿದೆ. ಚಿತ್ರಕ್ಕೆ ‘ಸಿಟಿ ಲೈಟ್ಸ್’ ಎಂಬ ಶೀರ್ಷಿಕೆ ಇಡಲಾಗಿದ್ದು, ‘ಜವಾಬ್ ದಾರಿ... ದೀಪಗಳು’ ಎಂಬ ಅಡಿಬರಹವಿದೆ. ಈಗಾಗಲೇ ವಿಜಯ್ ಅವರ ಮೊದಲ ಪುತ್ರಿ ರಿತನ್ಯಾ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದಾರೆ. ಜಡೇಶ್ ಕೆ.ಹಂಪಿ ನಿರ್ದೇಶನದ ವಿಜಯ್ ನಟನೆಯ 29ನೇ ಸಿನಿಮಾದಲ್ಲಿ ರಿತನ್ಯಾ ನಟಿಸುತ್ತಿದ್ದು, ಇದೀಗ ಮೋನಿಷಾ ಕೂಡಾ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ.