ವಿನಯ್ ರಾಜ್ಕುಮಾರ್ ಮತ್ತು ಅದಿತಿ ಪ್ರಭುದೇವ ಅಭಿನಯದ ‘ಅಂದೊಂದಿತ್ತು ಕಾಲ’ ಚಿತ್ರದ ‘ಮುಂಗಾರು ಮಳೆಯಲ್ಲಿ …’ ಹಾಡು ಕೆಲ ದಿನಗಳ ಹಿಂದೆ ಬಿಡುಗಡೆಗೊಂಡಿತ್ತು. ‘ಗೋಲ್ಡನ್ ಸ್ಟಾರ್’ ಗಣೇಶ್ ಮತ್ತು ‘ಮಳೆ ಹುಡುಗಿ’ ಪೂಜಾ ಗಾಂಧಿ ಹಾಡು ಬಿಡುಗಡೆ ಮಾಡಿದ್ದರು. ಕೀರ್ತಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

‘ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಸಂಗೀತ ನಿರ್ದೇಶಕ ವಿ. ರಾಘವೇಂದ್ರ ಎಲ್ಲಾ ಹಾಡುಗಳಿಗೆ ಬಹಳ ಚೆನ್ನಾಗಿ ಟ್ಯೂನ್ ಮಾಡಿಕೊಟ್ಟಿದ್ದಾರೆ. ಚಿತ್ರವು ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗುತ್ತಿದೆ. ಓರ್ವ ನಿರ್ದೇಶಕನ ಜೀವನದ ಕಥೆ. ನಮ್ಮ ಚಿತ್ರದ ನಿರ್ದೇಶಕ ಕೀರ್ತಿ ಅವರು ಜೀವನದಲ್ಲಿ ಅನುಭವಿಸಿದ ಘಟನೆಗಳು, ಅವರ ಸ್ನೇಹಿತರ ಅನುಭವಗಳನ್ನು ಸೇರಿಸಿ ಒಂದೊಳ್ಳೆಯ ಕಥೆ ಹೇಳಿದ್ದಾರೆ’ ಎಂದರು ವಿನಯ್ರಾಜ್ಕುಮಾರ್.

ಭುವನ್ ಸುರೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‘ಅಂದೊಂದಿತ್ತು ಕಾಲ’ ಎಂಬ ಹೆಸರೇ ಬಹಳ ಆಪ್ತವಾಗಿದೆ. ಈ ಚಿತ್ರದಲ್ಲಿ ನನಗೆ ಕಣ್ಣಲ್ಲೇ ಮಾತಾಡುವ ಪಾತ್ರವಿದೆ. ವಿನಯ್ ಅವರ ಜೊತೆಗೆ ಬಹಳ ಖುಷಿಯಿಂದ ಕೆಲಸ ಮಾಡಿದ್ದೇನೆ’ ಎಂದರು ಅದಿತಿ.

ನಿಶಾ ರವಿಕೃಷ್ಣನ್, ಜಗ್ಗಪ್ಪ, ಅರುಣಾ ಬಾಲರಾಜ್ ಮುಂತಾದವರು ನಟಿಸಿದ್ದು, ರವಿಚಂದ್ರನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರು, ತೀರ್ಥಹಳ್ಳಿ ಮುಂತಾದ ಕಡೆ ಚಿತ್ರದ ಚಿತ್ರೀಕರಣವಾಗಿದೆ. ಚಿತ್ರಕ್ಕೆ ಅಭಿಷೇಕ್ ಕಾಸರಗೋಡು ಛಾಯಾಚಿತ್ರಗ್ರಹಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.