ನಿರ್ದೇಶಕ ಶ್ರೀಲೇಶ್ ಎಸ್. ನಾಯರ್ ನಿರ್ದೇಶನದಲ್ಲಿ ವಿನಯ್ ರಗಡ್ ಲುಕ್‌ನಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿಲ್ಲ. ಸಿನಿಮಾದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಮಯೂರ್ ಪಟೇಲ್, ಯಶ್ ಶೆಟ್ಟಿ, ಬಲ ರಾಜವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್, ನವೀನ್ ಡಿ. ಪಡೀಲ್ ಮುಂತಾದವರು ತಾರಾಗಣದಲ್ಲಿದ್ದಾರೆ. ಚಿತ್ರಕ್ಕೆ ಅಭಿಷೇಕ್ ಜಿ. ಕಾಸರಗೋಡು ಛಾಯಾಚಿತ್ರಗ್ರಹಣ, ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನವಿದೆ.