ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ‘ವರದ’ ಫೆ. 18ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

‘‘ರಾಬರ್ಟ್’ ಸಿನಿಮಾ ನಂತರ ನನ್ನ ಅಭಿನಯದ ‘ವರದ’ ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ ದೃಶ್ಯಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ. ತಂದೆ-ಮಗನ ಬಾಂಧವ್ಯ ಈ ಚಿತ್ರದ ಹೈಲೆಟ್. ನನ್ನ ತಂದೆ ಪಾತ್ರದಲ್ಲಿ ಚರಣ್‌ರಾಜ್ ಅಭಿನಯಿಸಿದ್ದಾರೆ’ ಎಂದು ವಿನೋದ್ ಪ್ರಭಾಕರ್ ತಿಳಿಸಿದರು.

‘ನಾನು ಚಿತ್ರರಂಗಕ್ಕೆ ಬಂದು ಇಪ್ಪತ್ತೈದು ವರ್ಷಗಳಾಯಿತು. ಆರಂಭದಲ್ಲಿ ತುಂಬಾ ಕಷ್ಟದ ದಿನಗಳನ್ನು ನೋಡಿದ್ದೇನೆ. ನಮ್ಮ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ಅಮಿತಾ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ತಂತ್ರಜ್ಞರ ಕಾರ್ಯವಂತೂ ಅದ್ಭುತ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎನ್ನುತ್ತಾರೆ ನಿರ್ದೇಶಕ ಹಾಗೂ ನಿರ್ಮಾಪಕ ಉದಯ ಪ್ರಕಾಶ್.

‘ಚಿತ್ರವನ್ನು ನೋಡುವ ಕಾತುರದಲ್ಲಿದ್ದೇನೆ. ನಾನು ಈ ಚಿತ್ರದಲ್ಲಿ ‘ವರದ’ನ ಪ್ರೇಯಸಿಯಾಗಿ ಕಾಣಿಸಿಕೊಂಡಿದ್ದೀನಿ. ಚಿತ್ರ ನೋಡಿ ಹರಸಿ’ ಎಂದರು ನಾಯಕಿ ಅಮಿತ.

ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅನಿಲ್ ಸಿದ್ದು, ಎಂ.ಕೆ.ಮಠ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ಈ ಚಿತ್ರದ ಸಹ ನಿರ್ಮಾಪಕರು ಸುನಿತಾ ಪ್ರಕಾಶ್. ಕೆ.ಕಲ್ಯಾಣ್, ನಂದೀಶ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನಾಯಕರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆ ಜಿ ಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.