ಗುರುವಾರ , ಆಗಸ್ಟ್ 11, 2022
21 °C

‘ರಾಬರ್ಟ್’ ಚಿತ್ರದ ವಿನೋದ್ ಪ್ರಭಾಕರ್ ಫಸ್ಟ್‌ಲುಕ್ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಕೂಡ ನಟಿಸುತ್ತಿದ್ದಾರೆ. ವಿನೋದ್ ಜನ್ಮದಿನವಾದ ಇಂದು ಚಿತ್ರದ ಅವರ ಲುಕ್‌ನ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ನಿರ್ದೇಶಕ ತರುಣ್ ಸುಧೀರ್ ವಿನೋದ್ ಪ್ರಭಾಕರ್ ಅವರ ಫಸ್ಟ್‌ಲುಕ್‌ನ ಪೋಸ್ಟರ್‌ ಅನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಜನ್ಮದಿನದ ಹಾರ್ದಿಕ ಶುಭಾಶಯಗಳು ಬ್ರದರ್‌. ಈ ಹುಟ್ಟುಹಬ್ಬದ ಅಂಗವಾಗಿ ನಮ್ಮ ರಾಬರ್ಟ್ ತಂಡದ ವತಿಯಿಂದ ಈ ಪುಟ್ಟ ಕಾಣಿಕೆ’ ಎಂದು ಬರೆದುಕೊಂಡಿದ್ದಾರೆ.

ಪೋಸ್ಟರ್‌ನಲ್ಲಿ ವಿನೋದ್ ಕೈಯಲ್ಲಿ ಗನ್ ಹಿಡಿದುಕೊಂಡು ರಗಡ್‌ ಲುಕ್ ನೀಡಿದ್ದಾರೆ.

ಚಂದನವನದಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ ಈ ಚಿತ್ರವು ಈ ವರ್ಷದ ಬಹುನಿರೀಕ್ಷಿತ ಕನ್ನಡ ಚಿತ್ರವಾಗಿದೆ. ಆಶಾ ಭಟ್ ಈ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಡುತ್ತಿದ್ದಾರೆ. ಅಷ್ಟೇ ಅಲ್ಲದೇ ಸಿನಿಮಾದಲ್ಲಿ ತೆಲುಗಿನ ಖ್ಯಾತ ನಟ ಜಗಪತಿ ಬಾಬು, ಸೋನಲ್ ಮೊಂತೆರೊ ಮೊದಲಾದವರು ನಟಿಸುತ್ತಿದ್ದಾರೆ. ಚಿತ್ರದಲ್ಲಿ ವಿನೋದ್ ಪ್ರಭಾಕರ್ ಕೂಡ ಮುಖ್ಯಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಅವರ ಪಾತ್ರದ ಕುರಿತು ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಆದರೆ ಅಭಿಮಾನಿಗಳು ಅವರ ಪಾತ್ರದ ಕುರಿತು ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು