‘ರಾಬರ್ಟ್’ ಸಿನಿಮಾ ಬಳಿಕ ನಟ ವಿನೋದ್ ಪ್ರಭಾಕರ್ ಸಾಲು ಸಾಲು ಸಿನಿಮಾಗಳಿಗೆ ಹಸಿರು ನಿಶಾನೆ ತೋರುತ್ತಿದ್ದಾರೆ. ಮರಿ ಟೈಗರ್ ಇದೀಗ ‘ಫೈಟರ್’ ಆಗಿ ತೆರೆ ಮೇಲೆ ಬರಲಿದ್ದಾರೆ.

ನೂತನ್ ಉಮೇಶ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣ ಮಾಡಿರುವ ಈ ಚಿತ್ರ ಅಕ್ಟೋಬರ್ನಲ್ಲಿ ತೆರೆಗೆ ಬರಲು ಸಜ್ಜಾಗುತ್ತಿದೆ.

‘ಸದ್ಯದಲ್ಲೇ ಚಿತ್ರದ ಹಾಡುಗಳು ಹಾಗೂ ಟ್ರೈಲರ್ ಬಿಡುಗಡೆಯಾಗಲಿದೆ. ‘ಫೈಟರ್’ ಎಂದರೆ ಹೊಡೆದಾಡುವವನು ಎಂದು ತಿಳಿದುಕೊಳ್ಳುತ್ತಾರೆ. ಆದರೆ ನಮ್ಮ ‘ಫೈಟರ್’ ಅನ್ಯಾಯದ ವಿರುದ್ಧ ಹಾಗೂ ತನ್ನ ಕುಟುಂಬಕ್ಕಾಗಿ ಹೋರಾಡುವವನು. ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರು ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ’ ಎನ್ನುತ್ತಾರೆ ಉಮೇಶ್.

ಚಿತ್ರಕ್ಕೆ ಗುರುಕಿರಣ್ ಅವರ ಸಂಗೀತ ನಿರ್ದೇಶನವಿದ್ದು, ಪಾವನ ಹಾಗೂ ಲೇಖ ಚಂದ್ರ ನಾಯಕಿಯರಾಗಿ ನಟಿಸಿದ್ದಾರೆ. ನಟಿ ನಿರೋಶ ಈ ಚಿತ್ರದ ಮೂಲಕ ಹಲವು ವರ್ಷಗಳ ಬಳಿಕ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ಥ್ರಿಲ್ಲರ್ ಮಂಜು ಚಿತ್ರದ ಸಾಹಸ ನಿರ್ದೇಶನ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.