ವಿನೋದ್ ಪ್ರಭಾಕರ್ ನಾಯಕ ಪಾತ್ರದಲ್ಲಿರುವ ‘ವರದ’ ಚಿತ್ರ ಜ. 28ರಂದು ಬಿಡುಗಡೆಗೆ ಸಿದ್ಧತೆ ನಡೆದಿದೆ. ಚಿತ್ರದ ‘ಯಾರೇ ನೀನು....’ ಹಾಡನ್ನು ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿದ್ದಾರೆ. ಕೆ. ಕಲ್ಯಾಣ್ ರಚನೆಯ ಈ ಹಾಡಿಗೆ ಪ್ರದೀಪ್ ವರ್ಮಾ ಸಂಗೀತವಿದೆ.ವಿನಾಯಕರಾಮ್ ಅವರ ಸಂಭಾಷಣೆಯಿದೆ. ನಟ ದರ್ಶನ್ ಜೊತೆಗೆ ‘ರಾಬರ್ಟ್’ನಲ್ಲಿ ಕಾಣಿಸಿಕೊಂಡ ಬಳಿಕ ಸಣ್ಣ ಬ್ರೇಕ್‌ನ ನಂತರ ವಿನೋದ್ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ಉದಯ ಪ್ರಕಾಶ್ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರವಿದು. ಸುನೀತಾ ಪ್ರಕಾಶ್ ಸಹ ನಿರ್ಮಾಪಕರು.

ಕೆ.ಕಲ್ಯಾಣ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಬರೆದಿದ್ದಾರೆ.

ವಿನೋದ್ ಪ್ರಭಾಕರ್ ಅವರ ತಂದೆಯ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾರೆ. ಅಮಿತಾ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧಾ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ತಾರಾಬಳಗದಲ್ಲಿದ್ದಾರೆ.ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು. ಡಿ.ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್, ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

28ಕ್ಕೆ ಬಿಡುಗಡೆಯ ಯೋಜನೆಯೇನೋ ಇದೆ. ಆದರೆ, ಕೋವಿಡ್, ಓಮಿಕ್ರಾನ್ ಪರಿಸ್ಥಿತಿಗಳು ಸ್ಪಂದಿಸುತ್ತವೆಯೇ ಎಂಬುದನ್ನು ಕಾದು ನೋಡಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.