ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ನಟ ಸೋನು ಸೂದ್ ವಿರುದ್ಧ ಎಫ್ಐಆರ್

ಬಾಲಿವುಡ್ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ವಿರುದ್ಧ ಪಂಜಾಬ್ನಲ್ಲಿ ಎಫ್ಐಆರ್ ದಾಖಲಾಗಿದೆ.
ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋದಡಿಯಲ್ಲಿ ಸೋನು ಸೂದ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಮೊಗಾ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸಹೋದರಿ ಮಾಳವಿಕಾ ಸೂದ್ ಸಾಚಾರ್ ಅವರು ಮೊಗಾ ವಿಧಾನಸಭ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಚುನಾವಣೆ ದಿನ ಅವರ ಪರವಾಗಿ ಇಲ್ಲಿನ ಲಂಧೇಕ್ ಹಳ್ಳಿಯಲ್ಲಿ ಸೋನು ಸೂದ್ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಜತೆಗಿನ ಮದುವೆ ವಿಚಾರ: ನಟ ವಿಜಯ್ ದೇವರಕೊಂಡ ಹೇಳಿದ್ದೇನು?
ಸೋನು ಸೂದ್ ತನ್ನ ವರ್ಚಸ್ಸನ್ನು ಬಳಸಿಕೊಂಡು ಮತದಾರರ ಮೇಲೆ ಪ್ರಭಾವ ಬೀರಲು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಇದನ್ನೂ ಓದಿ: ‘ಭಿಮ್ಲಾ ನಾಯಕ್' ಟ್ರೈಲರ್: ಪವನ್ ಲುಕ್ಗೆ ಅಭಿಮಾನಿಗಳು ಫಿದಾ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.