ಖ್ಯಾತ ನಟ ರಾಣಾ ದಗ್ಗುಬಾಟಿ ಇಂದು 36ನೇ ವಯಸ್ಸಿಗೆ ಕಾಲಿರಿಸಿದ್ದಾರೆ. ಅವರ ಹುಟ್ಟುಹಬ್ಬದ ದಿನವಾದ ಇಂದು ಮುಂದಿನ ‘ವಿರಾಟಪರ್ವಂ’ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ಟೀಸರ್‌ನಲ್ಲಿ ದಂಗೆಗೆ ಹೊರಟ ನಕ್ಸಲ್ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ರಾಣಾ. ‘ಕಾಂತ್ರಿಯು ಪ್ರೀತಿಯ ಕ್ರಿಯೆ’ ಎಂಬ ಟ್ಯಾಗ್‌ಲೈನ್ ಕೂಡ ಚಿತ್ರಕ್ಕಿದೆ.

ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ವಿರಾಟಪರ್ವಂನ ಕಾಮ್ರೇಡ್ ರಾವಣ್ಣನನ್ನು ಪರಿಚಯಿಸುತ್ತಿದ್ದೇವೆ’ ಎಂದು ಬರೆದುಕೊಂಡು ಟೀಸರ್ ಅನ್ನು ಹಂಚಿಕೊಂಡಿದ್ದಾರೆ ರಾಣಾ.

ಈ ಟೀಸರ್ 1990ರಲ್ಲಿ ನಡೆದ ಸತ್ಯ ಘಟನೆಯನ್ನು ಆಧರಿಸಿದ ಸಿನಿಮಾ ವಿರಾಟಪರ್ವಂ ಎಂಬುದನ್ನು ತಿಳಿಸುತ್ತದೆ. ಆದರೆ ಟೀಸರ್‌ನಲ್ಲಿ ಇತರ ಪಾತ್ರವರ್ಗದ ಬಗ್ಗೆ ಹೆಚ್ಚಿನ ವಿವರಗಳಿಲ್ಲ. ಚಿತ್ರದಲ್ಲಿ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ರಾಣಾ ತಂದೆ ಸುರೇಶ್ ದಗ್ಗುಬಾಟಿ ಚಿತ್ರಕ್ಕೆ ಹಣ ಹೂಡಿಕೆ ಮಾಡುತ್ತಿದ್ದು ‘ನೀದಿ ನಾದಿ ಒಕೆ ಕಥಾ’ ಚಿತ್ರದ ಖ್ಯಾತಿಯ ವೇಣು ಉಡುಗುಲ ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಇದರಲ್ಲಿ ಹಾಲಿವುಡ್ ಸಿನಿಮಾ ತಂತ್ರಜ್ಞರು ಕೆಲಸ ಮಾಡಿದ್ದಾರೆ. ಹಾಲಿವುಡ್‌ನ ಸಾಹಸ ನಿರ್ದೇಶಕ ಸ್ಟೀಫನ್ ರಿಚರ್ ಹಾಗೂ ಯೂರೋಪಿಯನ್ ಫಿಲ್ಮ ಮೇಕರ್ ಡ್ಯಾನಿ ಸ್ಯಾಂಚೆ ಲೋಚೆಪ್ ಕೆಲಸ ಮಾಡಿದ್ದಾರೆ.

ಚಿತ್ರದಲ್ಲಿ ಪ್ರಿಯಾಮಣಿ, ನಿವೇಥಾ ಪೊತುರಾಜ್, ನಂದಿತಾ ದಾಸ್ ಹಾಗೂ ನವೀನ್ ಚಂದ್ರ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ವಿರಾಟಪರ್ವಂ ಈ ವರ್ಷದ ಆರಂಭದಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಸಿನಿಮಾದ ಪ್ರೊಡಕ್ಷನ್ ಕೆಲಸಗಳು ಬಾಕಿ ಉಳಿದಿದ್ದವು. ಚಿತ್ರದ ಶೂಟಿಂಗ್ ಇತ್ತೀಚೆಗೆ ಹೈದರಾಬಾದ್‌ನಲ್ಲಿ ಪುನರಾರಂಭವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.